ಪತಿಯಿಂದ ಮಹಿಳೆಗೆ ನಿಗದಿಪಡಿಸಿದ ಜೀವನಾಂಶ ಹೆಚ್ಚಳ ಮಾಡಲ್ಲ: ಹೈಕೋರ್ಟ್

Update: 2022-03-01 17:43 GMT

ಬೆಂಗಳೂರು: ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಪತಿಯಿಂದ ಮಹಿಳೆಗೆ ನಿಗದಿಪಡಿಸಿರುವ ಜೀವನಾಂಶವನ್ನು ಸಿಆರ್‍ಪಿಸಿಯಡಿ ಹೆಚ್ಚಳ ಮಾಡಲು ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಪತಿ ಶಿವಾನಂದ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ, ಪತ್ನಿ ಈಗಾಗಲೇ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಜೀವನಾಂಶ ಪಡೆಯುತ್ತಿದ್ದಾರೆ. ಹೀಗಾಗಿ, ಜೀವನಾಂಶವನ್ನು ಸಿಆರ್‍ಪಿಸಿಯಡಿ ಹೆಚ್ಚಳ ಮಾಡಲು ಅವಕಾಶವಿಲ್ಲ ಎಂದು ನ್ಯಾಯಾಲಯ ಹೇಳಿದೆ. 

ಮ್ಯಾಜಿಸ್ಟ್ರೇಟ್ ಕೋರ್ಟ್ ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಪತ್ನಿಗೆ ನಿಗದಿಪಡಿಸಿದ್ದ ಜೀವನಾಂಶವನ್ನು ಒಂದು ಸಾವಿರ ರೂ.ನಿಂದ 5ಸಾವಿರ ರೂ.ಗೆ ಹೆಚ್ಚಳ ಮಾಡಿತ್ತು. ಅದನ್ನು ಪ್ರಶ್ನಿಸಿ ಪತಿ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಾಲಯ, ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೊರಡಿಸುವ ಆದೇಶ ಕಾನೂನು ಬಾಹಿರವಾಗಿದೆ. ಹೀಗಾಗಿ, ರದ್ದುಪಡಿಸಲಾಗುತ್ತಿದೆ ಎಂದು ನ್ಯಾಯಪೀಠ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News