ರಾಜ್ಯದಲ್ಲಿ ಬುಧವಾರ 188 ಮಂದಿಗೆ ಕೊರೋನ ದೃಢ; 12 ಮಂದಿ ಮೃತ್ಯು

Update: 2022-03-02 15:25 GMT

ಬೆಂಗಳೂರು, ಮಾ.2: ರಾಜ್ಯದಲ್ಲಿ ಬುಧವಾರ 188 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 12 ಮಂದಿ ಸೋಂಕಿಗೆ ಬಲಿಯಾಗಿದ್ದು, 816 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,41,453ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 39,969ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 4,207ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

12 ಮಂದಿ ಸಾವು: ಬಳ್ಳಾರಿ 1, ಬೆಂಗಳೂರು ನಗರ4, ಧಾರವಾಡ 2, ಹಾಸನ 1, ಮಂಡ್ಯ 1, ರಾಮನಗರ 1, ತುಮಕೂರು 1, ಉಡುಪಿ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 188 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ  ಬಾಗಲಕೋಟೆ 2, ಬೆಳಗಾವಿ 4, ಬೆಂಗಳೂರು ನಗರ 106, ಚಾಮರಾಜನಗರ 1, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 4, ಚಿತ್ರದುರ್ಗ 2, ದಕ್ಷಿಣ ಕನ್ನಡ 2, ದಾವಣಗೆರೆ 5, ಧಾರವಾಡ 1, ಗದಗ 3, ಹಾಸನ 6, ಕಲಬುರಗಿ 5, ಕೊಡಗು 3, ಕೋಲಾರ 3, ಮಂಡ್ಯ 3, ಮೈಸೂರು 9, ರಾಯಚೂರು 1, ರಾಮನಗರ 1, ಶಿವಮೊಗ್ಗ 6, ತುಮಕೂರು 3, ಉಡುಪಿ 7, ಉತ್ತರ ಕನ್ನಡ 5, ಯಾದಗಿರಿ  ಜಿಲ್ಲೆಯಲ್ಲಿ 1 ಪ್ರಕರಣ ಪತ್ತೆಯಾಗಿದೆ.  

ರಾಜಧಾನಿಯಲ್ಲಿ 106 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಬುಧವಾರದಂದು 106 ಜನರಿಗೆ ಕೊರೋನ ಸೋಂಕು ದೃಢಪಟ್ಟಿವೆ. 4 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು 17,59,118 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 17,78,778 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,924 ಜನರು ಸೋಂಕಿಗೆ ಬಲಿಯಾಗಿದ್ದಾರೆ. 
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News