ಕೊಲೆಯಾದ ಹರ್ಷ ಕುಟುಂಬಕ್ಕೆ ಸರಕಾರದಿಂದ 25 ಲಕ್ಷ ರೂ. ಪರಿಹಾರ: ಸಚಿವ ಈಶ್ವರಪ್ಪ
Update: 2022-03-03 14:11 IST
ಶಿವಮೊಗ್ಗ, ಮಾ.3: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ದುಃಖ ವ್ಯಕ್ತಪಡಿಸಿದ್ದು, ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡುವುದಾಗಿ ತಿಳಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರವಿವಾರ ಹರ್ಷ ನಿವಾಸಕ್ಕೆ ಭೇಟಿ ನೀಡುತ್ತಾರೆ. ಈ ವೇಳೆ ನಾನು ಹಾಗೂ ಯಡಿಯೂರಪ್ಪ ಅವರು ಸರಕಾರದ ಪರವಾಗಿ 25 ಲಕ್ಷ ರೂ. ಪರಿಹಾರವನ್ನು ಹರ್ಷ ಕುಟುಂಬಕ್ಕೆ ನೀಡಲಿದ್ದೇವೆ ಎಂದು ಹೇಳಿದರು.
ವಿಶ್ವನಾಥ ಶೆಟ್ಟಿ ಕೊಲೆಯಾದಾಗ ಸಂತ್ರಸ್ತ ಕುಟುಂಬಕ್ಕೆ ಬಿಜೆಪಿ 18 ಲಕ್ಷ ರೂ. ತಲುಪಿಸಿತ್ತು. ಈ ಬಗ್ಗೆ ಟೀಕೆ- ಟಿಪ್ಪಣಿಗಳು ಸ್ವಾಭಾವಿಕ. ಆ ಸಂದರ್ಭದಲ್ಲಿ ನಮ್ಮಕರ್ತವ್ಯ ನಾವು ಮಾಡಿದ್ದೇವೆ. ಹರ್ಷ ಕುಟುಂಬಕ್ಕೂ ಸಹ ಹಿಂದೂ ಸಮಾಜ ಏನೇನು ಸಹಾಯ ಮಾಡಬಹುದೋ ಅದನ್ನು ಮಾಡುತ್ತೇವೆ ಈಶ್ವರಪ್ಪ ನುಡಿದರು.