ರಾಜ್ಯದಲ್ಲಿ ಗುರುವಾರ 382 ಮಂದಿಗೆ ಕೊರೋನ ದೃಢ: 10 ಮಂದಿ ಮೃತ್ಯು

Update: 2022-03-03 16:43 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.3: ರಾಜ್ಯದಲ್ಲಿ ಗುರುವಾರ 382 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 10 ಮಂದಿ ಸೋಂಕಿಗೆ ಬಲಿಯಾಗಿದ್ದು, 689 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 3941835ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 39,979ಕ್ಕೆ ತಲುಪಿದೆ.        

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 3,890ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

10 ಮಂದಿ ಸಾವು: ಬೆಂಗಳೂರು ನಗರ 4, ಬೀದರ್ 1, ಧಾರವಾಡ 1, ಮಂಡ್ಯ 1, ತುಮಕೂರು 1, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 382 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ  ಬಳ್ಳಾರಿ 14, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 239, ಬೀದರ್ 2, ಚಾಮರಾಜನಗರ 6, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 3, ಚಿತ್ರದುರ್ಗ 6, ದಕ್ಷಿಣ ಕನ್ನಡ 6, ಧಾರವಾಡ 11, ಗದಗ 1, ಹಾಸನ 5, ಕಲಬುರಗಿ 6, ಕೊಡಗು 16, ಕೋಲಾರ 3, ಕೊಪ್ಪಳ 1, ಮೈಸೂರು 15, ಶಿವಮೊಗ್ಗ 10, ತುಮಕೂರು 12, ಉಡುಪಿ 7, ಉತ್ತರ ಕನ್ನಡ 7, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 1 ಪ್ರಕರಣ ಪತ್ತೆಯಾಗಿದೆ.  

ರಾಜಧಾನಿಯಲ್ಲಿ 239 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಗುರುವಾರದಂದು 239 ಜನರಿಗೆ ಕೊರೋನ ಸೋಂಕು ದೃಢಪಟ್ಟಿವೆ. 4 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು 17,59,458 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 17,79,017 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,928 ಜನರು ಸೋಂಕಿಗೆ ಬಲಿಯಾಗಿದ್ದಾರೆ. 

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News