×
Ad

ಬಿಹಾರ: ಮನೆಯಲ್ಲಿ ಸ್ಫೋಟ ಸಂಭವಿಸಿ ಏಳು ಮಂದಿ ಮೃತ್ಯು

Update: 2022-03-04 10:08 IST

ಪಾಟ್ನಾ: ಬಿಹಾರದ ಭಾಗಲ್ಪುರ ಜಿಲ್ಲೆಯ ತತಾರ್‌ಪುರ ಪೊಲೀಸ್ ವ್ಯಾಪ್ತಿಯ ಮನೆಯೊಂದರಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ  ಕುಟುಂಬದವರು ಪಟಾಕಿ ತಯಾರಿಕೆಯಲ್ಲಿ ತೊಡಗಿದ್ದಾಗ ಈ ಘಟನೆ ಸಂಭವಿಸಿದೆ.

"ಕುಟುಂಬದವರು ಪಟಾಕಿ ತಯಾರಿಕೆಯಲ್ಲಿ ತೊಡಗಿಸಿಕೊಂಡಿರುವುದು ಮೇಲ್ನೋಟಕ್ಕೆ ಬೆಳಕಿಗೆ ಬಂದಿದೆ. ಸ್ಫೋಟದಲ್ಲಿ ಅಕ್ಕಪಕ್ಕದ ಎರಡು-ಮೂರು ಮನೆಗಳಿಗೂ ಹಾನಿಯಾಗಿದೆ. ನಾವು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ" ಎಂದು ಭಾಗಲ್ಪುರ ಡಿಎಂ ಸುಬ್ರತ್ ಕುಮಾರ್ ಸೇನ್ ಹೇಳಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News