×
Ad

ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವನ ಪುತ್ರನ ಜಾಮೀನು ರದ್ದುಕೋರಿ ಅರ್ಜಿ; ಮಾ.11ರಂದು ಸುಪ್ರೀಂಕೋರ್ಟ್ ವಿಚಾರಣೆ

Update: 2022-03-04 11:32 IST

ಹೊಸದಿಲ್ಲಿ: ಉತ್ತರಪ್ರದೇಶದ  ಲಖಿಂಪುರ ಖೇರಿಯಲ್ಲಿ  ಕೇಂದ್ರಸರಕಾರದ ಕೃಷಿ ವಿರೋಧಿ ಕಾನೂನು ವಿರುದ್ದ  ಪ್ರತಿಭಟನೆ ನಡೆಸುತ್ತಿದ್ದ  ರೈತರ ಮೇಲೆ ಕಾರನ್ನು ಚಲಾಯಿಸಿದ್ದ  ಕೇಂದ್ರ ಸಚಿವರ ಪುತ್ರನ ಜಾಮೀನು ರದ್ದುಗೊಳಿಸುವಂತೆ ಕೋರಿ ಉತ್ತರ ಪ್ರದೇಶದ ರೈತರ ಕುಟುಂಬಗಳು ಸಲ್ಲಿಸಿರುವ ಅರ್ಜಿಯನ್ನು ಮಾರ್ಚ್‌11 ರಂದು  ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿಸಿದೆ.

ಹೆಚ್ಚಿನ ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್‌ಗೆ ಹೋಗುತ್ತಿದ್ದಾರೆ ಹಾಗೂ ಅವರು   ಸಾಕ್ಷ್ಯವನ್ನು ಹಾಳುಮಾಡಬಹುದು ಹಾಗೂ  ಹಾಗೂ  ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು. ಹೀಗಾಗಿ ಅದನ್ನು ನಿಲ್ಲಿಸಬೇಕು ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಮಾರ್ಚ್ 11 ರಂದು ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಅಲಹಾಬಾದ್ ಹೈಕೋರ್ಟ್‌ಗೆ ತಿಳಿಸುವಂತೆ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಸುಪ್ರೀಂ ಕೋರ್ಟ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News