×
Ad

ಪ್ರಮೀಳಾ ಜೆ.ವಾಜ್‌ಗೆ ಡಾಕ್ಟರೇಟ್

Update: 2022-03-04 20:48 IST

ಉಡುಪಿ, ಮಾ.4: ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದಲ್ಲಿ ಉಪನ್ಯಾಸಕಿಯಾಗಿರುವ ಪ್ರಮೀಳಾ ಜೆ.ವಾಜ್ ಅವರು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನ ವಿಭಾಗಕ್ಕೆ ಸಲ್ಲಿಸಿದ ‘ಮಕ್ಕಳ ರಕ್ಷಣಾ ವ್ಯವಸ್ಥೆ ಮತ್ತು ಮಕ್ಕಳ ಅಭಿವೃದ್ಧಿ’ ಎಂಬ ಮಹಾಪ್ರಬಂಧಕ್ಕೆ ಪಿಹೆಚ್‌ಡಿ ಪದವಿ ಪಡೆದಿದ್ದಾರೆ.

ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗ ಮುಖ್ಯಸ್ಥ ಡಾ.ದುಗ್ಗಪ್ಪ ಕಜೆಕಾರ್ ಅವರ ಮಾರ್ಗದರ್ಶನದಲ್ಲಿ ಪ್ರಮೀಳಾ ಪ್ರಬಂಧವನ್ನು ಸಿದ್ಧಪಡಿಸಿದ್ದರು. ಪ್ರಮೀಳಾ ವಾಜ್, ಸರಕಾರಿ ಪ್ರಥಮ ದರ್ಜೆ ಕಾಲೇಜು ಬಾರಕೂರು ಹಾಗೂ ಕೋಟ ಪಡುಕೆರೆಗಳಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಕರಾವಳಿಯ ವಿವಿಧ ಎನ್‌ಜಿಒಗಳಲ್ಲಿ ಸೇವೆ ಸಲ್ಲಿಸಿದ ಅನುಭವವಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News