×
Ad

ಯಾದಗಿರಿಯಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ: ಮೃತರ ಕುಟುಂಬಗಳಿಗೆ ಪರಿಹಾರ ನೀಡಲು ಸಿಎಂಗೆ ಸಚಿವ ಪ್ರಭು ಚೌಹಾಣ್ ಮನವಿ

Update: 2022-03-04 21:04 IST
ಸಿಎಂಗೆ ಮನವಿ ಸಲ್ಲಿಸುತ್ತಿರುವ ಸಚಿವ ಪ್ರಭು ಚೌಹಾಣ್ 

ಬೆಂಗಳೂರು, ಮಾ. 4: ‘ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಯುಕೆಪಿ ಕ್ಯಾಂಪಿನಲ್ಲಿ ಸಿಲಿಂಡರ್ ಸ್ಫೋಟದಲ್ಲಿ ಮೃತರಾದ ಕುಟುಂಬಸ್ಥರಿಗೆ ಪರಿಹಾರ ಧನ ಘೋಷಣೆ ಮಾಡಬೇಕು' ಎಂದು ಪಶು ಸಂಗೋಪನೆ ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ್, ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.

ಶುಕ್ರವಾರ ನಗರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದು, ದುರಂತದಲ್ಲಿ ಮರಣ ಹೊಂದಿದ 11 ಜನ ಕಡುಬಡವರಾಗಿದ್ದು, ಅವರ ಕುಟುಂಬ ವರ್ಗದವರಿಗೆ 5 ಲಕ್ಷ ರೂ.ಪರಿಹಾರ ಹಾಗೂ ಚಿಕಿತ್ಸೆ ಪಡೆಯುತ್ತಿರುವ 13 ಜನರಿಗೆ ಉಚಿತವಾಗಿ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಮನವಿ ಪತ್ರ ನೀಡಿದ್ದೇನೆ ಎಂದರು.

ಫೆ.25ರಂದು ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂನ ದೋರನಹಳ್ಳಿ ಯುಕೆಪಿ ಕ್ಯಾಂಪ್ ನಿವಾಸಿ ಸಾಹೇಬಗೌಡ ಅವರ ಮನೆಯಲ್ಲಿ ನಡೆಯುತ್ತಿದ್ದ ಸೀಮಂತ ಕಾರ್ಯಕ್ರಮದಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಫೋಟದ ಪರಿಣಾಮದಿಂದ ಈವರೆಗೂ 11 ಮಂದಿ ಮೃತರಾಗಿದ್ದು, 13 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವವರ ಪೈಕಿ 3 ಜನರ ಸ್ಥಿತಿ ಚಿಂತಾಜನವಾಗಿದೆ. ನಾನು ಘಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವಾನ ಹೇಳಿ, ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿ, ಸರಕಾರ ಸದಾ ನಿಮ್ಮೊಂದಿಗಿದೆ ಎಂದು ಧೈರ್ಯ ತುಂಬಿರುವೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News