ರಾಜ್ಯ ಬಜೆಟ್ 2022: ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ

Update: 2022-03-04 18:16 GMT

ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ 2022-23ನೇ ಸಾಲಿನಲ್ಲಿ ಒಟ್ಟಾರೆಯಾಗಿ 8,409 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ.

• ಬೆಂಗಳೂರು ನಗರದ ಮೂಲಭೂತ ಸೌಕರ್ಯಕ್ಕಾಗಿ ಮೂರು ವರ್ಷದಲ್ಲಿ 6,000 ಕೋಟಿ ರೂ.ಗಳ ವೆಚ್ಚದಲ್ಲಿ ‘ಅಮೃತ್ ನಗರೋತ್ಥಾನ’ ಯೋಜನೆಯನ್ನು ಮುಂದಿನ 3 ವರ್ಷಗಳಲ್ಲಿ ಅನುಷ್ಠಾನಗೊಳಿಸಲಾಗುವುದು.

• 1,500 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ನಗರದ ವಿವಿಧ ಸ್ಥಳಗಳಲ್ಲಿರುವ ಹಳೆಯ 20 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಪುನರುಜ್ಜೀವನ ಮತ್ತು ಉನ್ನತೀಕರಣ ಮಾಡಲು ಕ್ರಮ ವಹಿಸಲಾಗುವದು.

• ಬೃಹತ್ ಮಳೆ ನೀರುಗಾಲುವೆ ಹಾಗೂ ರಾಜಕಾಲುವೆ ಅಭಿವೃದ್ಧಿಗೆ ಅಮೃತ್ ನಗರೋತ್ಥಾನ ಯೋಜನೆಯಡಿ 1,500 ಕೋಟಿ ರೂ. ಮೀಸಲಿಡಲಾಗಿದೆ.

• ಸುಗಮ ಸಂಚಾರ

• 11,250 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ನಮ್ಮ ಮೆಟ್ರೋ ಹಂತ-3 ಯೋಜನೆ ಜಾರಿಗೆ ಕೇಂದ್ರಕ್ಕೆ ವಿಸ್ಕøತ ಯೋಜನಾ ವರದಿ (ಡಿ.ಪಿ.ಆರ್) ಸಲ್ಲಿಸಲಾಗುವುದು. 

• 2022-23ನೇ ಸಾಲಿನಲ್ಲಿ 15,000 ಕೋಟಿ ರೂ. ವೆಚ್ಚದಲ್ಲಿ 37 ಕಿ.ಮೀ. ಉದ್ದದ ಸರ್ಜಾಪುರದಿಂದ ಡೈರಿ ಸರ್ಕಲ್ ಮುಖಾಂತರ ಹೆಬ್ಬಾಳ ಸೇರುವ ಹೊಸ ಮೆಟ್ರೋ ಮಾರ್ಗಕ್ಕೆ ಡಿಪಿಆರ್ ತಯಾರಿಸಲು ಕ್ರಮವಹಿಸಲಾಗುವುದು. 

• ವೈಟ್‍ಫೀಲ್ಡ್, ಕೆ.ಆರ್.ಪುರಂ, ಬೈಯ್ಯಪ್ಪನಹಳ್ಳಿ, ಯಶವಂತಪುರ, ಜ್ಞಾನಭಾರತಿ ಮತ್ತು ಯಲಹಂಕ ರೈಲ್ವೆ ನಿಲ್ದಾಣಗಳಲ್ಲಿ 55 ಕೋಟಿ ರೂ. ವೆಚ್ಚದಲ್ಲಿ ಮೆಟ್ರೋ ನಿಲ್ದಾಣದ ಸಂಪರ್ಕ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. 

• ಬನಶಂಕರಿ ಜಂಕ್ಷನ್ ರೂ. 45 ಕೋಟಿ ವೆಚ್ಚದಲ್ಲಿ "ಸ್ಕೈವಾಕ್" ನಿರ್ಮಾಣಕ್ಕೆ ಕ್ರಮವಹಿಸಲಾಗುವುದು.

• 2006ರಿಂದ ನನೆಗುದಿಗೆ ಬಿದ್ದಿರುವ ತುಮಕೂರು ರಸ್ತೆಯಿಂದ ಬಳ್ಳಾರಿ ರಸ್ತೆ ಹಾಗೂ ಹಳೆ ಮದ್ರಾಸ್ ರಸ್ತೆಯನ್ನು ಹಾದು ಹೋಗಿ ಹೊಸೂರು ರಸ್ತೆ ಸೇರುವ 73 ಕಿ.ಮೀ ಉದ್ದದ ಹಾಗೂ 100 ಮೀ. ಅಗಲದ ಪೆರಿಫರಲ್ ರಿಂಗ್ ರಸ್ತೆ ನಿರ್ಮಾಣ 21,091 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಿಸಲು ಕ್ರಮವಹಿಸಲಾಗುವುದು.

• ಗೊರಗುಂಟೆಪಾಳ್ಯ ಜಂಕ್ಷನ್‍ನಲ್ಲಿ ಸಿಗ್ನಲ್ ಮುಕ್ತ ವಾಹನ ಸಂಚಾರಕ್ಕೆ ಬಿ.ಬಿ.ಎಂ.ಪಿ., ಬಿ.ಡಿ.ಎ. ಮತ್ತು ಎನ್.ಹೆಚ್.ಎ.ಐ ವತಿಯಿಂದ ಗ್ರೇಡ್ ಸೆಪರೇಟರ್ ಮತ್ತು ಮೇಲುಸೇತುವೆ ಕಾಮಗಾರಿಗಳ ಅನುಷ್ಠಾನ ಮಾಡಲು ಕ್ರಮವಹಿಸಲಾಗುವುದು. 

• 15,267 ಕೋಟಿ ರೂ. ವೆಚ್ಚದ ಬೆಂಗಳೂರು ಉಪನಗರ ರೈಲ್ವೆ ಯೋಜನೆ ಜಾರಿಗೊಳಿಸಲು ನಾಲ್ಕು ಕಾರಿಡಾರ್‍ಗಳನ್ನು ನಿರ್ಮಿಸಲು ಉದ್ದೇಶಿಸಿದ್ದು, ಚಿಕ್ಕಬಾಣಾವರ-ಬೈಯಪ್ಪನಹಳ್ಳಿ ಕಾರಿಡಾರ್ ಕಾಮಗಾರಿ ಶೀಘ್ರವೇ ಆರಂಭಿಸಲಾಗುವುದು.

• ಹಸಿರು ಬೆಂಗಳೂರು

• ಎನ್‍ಜಿಇಎಫ್‍ನ 105 ಎಕರೆ ಪ್ರದೇಶದಲ್ಲಿ ಸಿಂಗಾಪುರ್ ಮಾದರಿಯಲ್ಲಿ ಗ್ರೀನ್ ಎಕ್ಸ್‍ಪೋ ಅನ್ನು ನಿರ್ಮಾಣ ಮಾಡಲು ಕ್ರಮವಹಿಸಲಾಗುವುದು.

• 312 ಕೋಟಿ ರೂ. ಮೊತ್ತದಲ್ಲಿ ತಿಪ್ಪಗೊಂಡನಹಳ್ಳಿ ಜಲಾಶಯ ಪುನಶ್ಚೇತನ ಕಾಮಗಾರಿ ಮುಕ್ತಾಯಗೊಳಿಸಲಾಗುವುದು. 
ನಾಗರಿಕ ಸೇವೆಗಳು

• ಬೆಂಗಳೂರಿನ ನಾಲ್ಕು ಭಾಗಗಳಲ್ಲಿ 500 ಹಾಸಿಗೆ ಸಾಮಥ್ರ್ಯದ ಸೂಪರ್ ಸ್ಪೆμÁಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು.
• ಬೆಂಗಳೂರಿನ ಆಯ್ದ 20 ಶಾಲೆಗಳನ್ನು 89ಕೋಟಿ ರೂ.ಗಳಲ್ಲಿ ಉನ್ನತೀಕರಿಸಿ, “ಬೆಂಗಳೂರು ಪಬ್ಲಿಕ್ ಶಾಲೆ”ಗಳ ಅಭಿವೃದ್ಧಿಪಡಿಸಲಾಗುವುದು.

• ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆರು ಲಕ್ಷಕ್ಕೂ ಹೆಚ್ಚು ಸ್ವತ್ತುಗಳ ವಿವರಗಳನ್ನು ಬಿ ವಹಿಯಲ್ಲಿ ದಾಖಲಿಸಲಾಗಿದ್ದು, ಸದರಿ ಸ್ವತ್ತುಗಳನ್ನು ಎ ವಹಿಗೆ ದಾಖಲಿಸು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

• ನಗರಕ್ಕೆ ಹೆಚ್ಚುವರಿಯಾಗಿ 775 ದಶಲಕ್ಷ ಲೀಟರ್ ಕಾವೇರಿ ನೀರನ್ನು ತರಲು 5,550 ಕೋಟಿ ವೆಚ್ಚದ ಯೋಜನೆ ಪ್ರಗತಿಯಲ್ಲಿದ್ದು, 2024-25ನೇ ಸಾಲಿನ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು. 

• ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಬಾಕಿ ಉಳಿದಿರುವ 1,297 ಎಕರೆ ಜಮೀನಿನ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ಆಧುನಿಕ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News