ನಟ ಚೇತನ್ ಅಹಿಂಸಾ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆಗೆ ಅನುಮತಿ ಕೋರಿ ಪೊಲೀಸರಿಂದ ಸರಕಾರಕ್ಕೆ ಪತ್ರ

Update: 2022-03-05 12:34 GMT
ನಟ ಚೇತನ್ ಅಹಿಂಸಾ

ಬೆಂಗಳೂರು, ಮಾ.5: ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ* ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ವಿರುದ್ಧ ದಾಖಲಾಗಿದ್ದ ದೂರಿಗೆ ಸಂಬಂಧಿಸಿದಂತೆ, ಚಾರ್ಜ್‍ಶೀಟ್ ಸಲ್ಲಿಸಲು ಬಸವನಗುಡಿ ಪೊಲೀಸರು ಸರಕಾರಕ್ಕೆ ಅನುಮತಿ ಕೋರಿ ಪತ್ರ ಬರೆದಿದ್ದಾರೆ.

ಬ್ರಾಹ್ಮಣ ಸಮುದಾಯದ ಅವಹೇಳನವನ್ನು ಖಂಡಿಸಿ, ಕಳೆದ ವರ್ಷ ಜೂ.10ರಂದು ವಿಪ್ರ ಯುವ ವೇದಿಕೆಯ ಅಧ್ಯಕ್ಷ ಪವನ್ ಕುಮಾರ್ ಶರ್ಮಾ ಬಸವನಗುಡಿ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಐಪಿಸಿ ಸೆಕ್ಷನ್ 153(ಎರಡು ಸಮುದಾಯಗಳ ನಡುವೆ ಕೋಮು ಭಾವನೆ ಉಂಟುಮಾಡುವ ಮೂಲಕ ಗಲಭೆಗೆ ಪ್ರಚೋದನೆ)ನಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದರು. ವಿಚಾರಣೆ ಸಂದರ್ಭದಲ್ಲಿಯೂ ಚೇತನ್ ಬೆಂಬಲಿಗರು ಠಾಣೆ ಬಳಿ ಜಮಾಯಿಸಿ ಕೋವಿಡ್ ನಿಯಮ ಉಲ್ಲಂಘಿಸಿರುವುದಾಗಿ ಪ್ರತ್ಯೇಕ ಪ್ರಕರಣವನ್ನು ದಾಖಲಿಸಿಕೊಂಡಿದ್ದರು.

ಈಗ ಸೆಕ್ಷನ್ 153ರ ಅಡಿ ದಾಖಲಾದ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಗೆ ಸರಕಾರದ ಅನುಮತಿ ಅಗತ್ಯ ಇರುವುದರಿಂದ ಅನುಮತಿ ಕೋರಿ ಬಸವನಗುಡಿ ಪೊಲೀಸರು ಸರಕಾರಕ್ಕೆ ಪತ್ರ ಬರೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News