ಉಡುಪಿ: ಮಾರ್ಚ್ 6ರಂದು ಬಾಲ್ಯ ವಿವಾಹ ನಿಷೇಧ ಅಭಿಯಾನಕ್ಕೆ ಚಾಲನೆ
Update: 2022-03-05 19:19 IST
ಉಡುಪಿ, ಮಾ.5: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ಜಿಲ್ಲೆ ಮತ್ತು ಬಾಲ್ಯ ವಿವಾಹ ನಿಷೇಧ ಭಾಗೀದಾರ ಇಲಾಖೆಗಳ ಸಹಯೋಗದೊಂದಿಗೆ, ಬಾಲ್ಯ ವಿವಾಹ ನಿಷೇಧ ಆಭಿಯಾನ ‘ವೀಡಿಯೋ ಆನ್ ವೀಲ್ಹ್’ನ ಉದ್ಘಾಟನೆ ಮಾರ್ಚ್ 6ರ ರವಿವಾರ ಬೆಳಗ್ಗೆ 9:30ಕ್ಕೆ ಮಣಿಪಾಲದಲ್ಲಿರುವ ಜಿಪಂನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಉಡುಪಿ ಶಾಸಕ ರಘುಪತಿ ಭಟ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಹಿರಿಯ ಸಿವಿಲ್ ನ್ಯಾಯಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಭಾಗವಹಿಸಲಿದ್ದಾರೆ.