ವಿಟ್ಲ: ಹೊರೈಝನ್ ಸ್ಕೂಲ್ ನಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
ವಿಟ್ಲ, ಮಾ.5: ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್ ನ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವು ಶಾಲಾಡಳಿತ ಸಮಿತಿಯ ಅಧ್ಯಕ್ಷ ಮುಹಮ್ಮದ್ ಇಕ್ಬಾಲ್ ಹಾನೆಸ್ಟ್ ಅಧ್ಯಕ್ಷತೆಯಲ್ಲಿ ನಡೆಯಿತು.
ಶಾಲಾ ಸಂಚಾಲಕ ನೋಟರಿ ಅಬೂಬಕರ್, ಉಪಾಧ್ಯಕ್ಷ ಗಫೂರ್ ಮೇಗಿನಪೇಟೆ, ಕಾರ್ಯದರ್ಶಿ ಇಕ್ಬಾಲ್ ಮೇಗಿನಪೇಟೆ, ಜತೆ ಕಾರ್ಯದರ್ಶಿ ಹನೀಫ್ ಎಂ.ಎ., ಮೇಲ್ವಿಚಾರಕ ವಿ.ಕೆ.ಎಂ.ಅಶ್ರಫ್, ಟ್ರಸ್ಟಿ ಸಿದ್ದೀಕ್ ಮಾಲಮೂಲೆ, ಮಸೀದಿಯ ಕಾರ್ಯದರ್ಶಿ ಅಬ್ದುಲ್ ಹಮೀದ್ ಬದ್ರಿಯಾ, ಸುರಕ್ಷಾ ಸಮಿತಿಯ ಅಬೂಬಕರ್ ಅನಿಲಕಟ್ಟೆ ಮುಂತಾದವರು ವೇದಿಕೆಯಲ್ಲಿದ್ದರು.
ಇದೇ ಸಂದರ್ಭದಲ್ಲಿ ಕಳೆದ ವರ್ಷ ಎಸೆಸೆಲ್ಸಿಯಲ್ಲಿ ಸಾಧನೆ ಮಾಡಿದ ಆಯಿಷತ್ ರಿದಾ ಹಾಗೂ ಅಹ್ಮದ್ ಅಝೀಮ್ ರನ್ನು ಚಿನ್ನದ ನಾಣ್ಯ ನೀಡಿ ಸನ್ಮಾನಿಸಲಾಯಿತು
ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು ಹಾಗೂ ಗಾಯತ್ರಿ, ತರಗತಿ ಶಿಕ್ಷಕಿ ಹಿತಶ್ರೀ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವಿದ್ಯಾರ್ಥಿಗಳಾದ ಹವ್ವ ಹನನ್ ಸ್ವಾಗತಿಸಿದರು. ಸೈಫ್ ವಂದಿಸಿದರು. ತೌಫೀಕಾ ಕಾರ್ಯಕ್ರಮ ನಿರೂಪಿಸಿದರು.