×
Ad

ಯಾದಗಿರಿ ಸಿಲಿಂಡರ್ ದುರಂತ: ರಾಜ್ಯ ಸರಕಾರದಿಂದ ಮೃತ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ರೂ.ಪರಿಹಾರ

Update: 2022-03-05 22:44 IST

ಯಾದಗಿರಿ, ಮಾ.5: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮಕ್ಕೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ಣ ಸವದಿ ಭೇಟಿ ನೀಡಿ, ಸಿಲಿಂಡರ್ ದುರಂತ ಘಟನೆಯಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಅಲ್ಲದೆ, ಕುಟುಂಬ ಸದಸ್ಯರಿಗೆ ಬಿಜೆಪಿ ಪಕ್ಷದಿಂದ 1 ಲಕ್ಷ ರೂ.ಆರ್ಥಿಕ ಸಹಾಯ ಹಾಗೂ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂ.ಪರಿಹಾರದ ಹಣ ನೀಡಲಾಗುತ್ತದೆ. ಮೃತರ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡುವ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಬೈರತಿ ಬಸವರಾಜ ತಿಳಿಸಿದರು.

ಈ ಸಂದರ್ಭದಲ್ಲಿ ಯಾದಗಿರಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಸುರಪುರ ಶಾಸಕ ರಾಜುಗೌಡ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಶಾ ಆಲಂ ಹುಸೇನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದುಮತಿ ಪಾಟೀಲ್, ಶಹಾಪುರ ತಾಲೂಕು ವೈದ್ಯಾಧಿಕಾರಿ ರಮೇಶ ಗುತ್ತೇದಾರ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News