ಎಸ್ಕೆಎಸ್ಸೆಸ್ಸೆಫ್ ದೇರಳಕಟ್ಟೆ ಶಾಖೆಯ ನೂತನ ಕಚೇರಿ ಉದ್ಘಾಟನೆ
ಕೊಣಾಜೆ, ಮಾ.6: ಎಸ್ಕೆಎಸ್ಸೆಸ್ಸೆಫ್ ದೇರಳಕಟ್ಟೆ ಶಾಖೆಯ ನೂತನ ಕಚೇರಿಯನ್ನು ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಅಧ್ಯಕ್ಷ ಸೈಯದುಲ್ ಉಲಮಾ ಸೈಯದ್ ಮುಹಮ್ಮದ್ ಜಿಫ್ರಿ ಮುತ್ತುಕ್ಕೋಯ ತಂಙಳ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ವಿಪಕ್ಷ ಉಪ ನಾಯಕ ಯು.ಟಿ.ಖಾದರ್, ದೇರಳಕಟ್ಟೆ ಬದ್ರಿಯಾ ಜುಮಾ ಮಸೀದಿಯ ಖತೀಬ್ ಇಸ್ಹಾಕ್ ಫೈಝಿ, ಮಂಗಳನಗರದ ಶಂಸುಲ್ ಉಲಮಾ ದಾರುಸ್ಸಲಾಂ ಅಕಾಡಮಿಯ ಅಧ್ಯಕ್ಷ ತಬೂಕ್ ಅಬ್ದುರ್ರಹ್ಮಾನ್ ದಾರಿಮಿ, ಎಸ್ಕೆಎಸ್ಸೆಸ್ಸೆಫ್ ಕೇಂದ್ರ ಸಮಿತಿಯ ಕಾರ್ಯದರ್ಶಿ ಇಸ್ಮಾಯೀಲ್ ಯಮಾನಿ ತಿಂಗಳಾಡಿ,
ಇಸ್ಮಾಯಿಲ್ ತಂಙಳ್ ಉಪ್ಪಿನಂಗಡಿ, ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಕೆ.ಅಬೂಬಕರ್, ಮಾಜಿ ಅಧ್ಯಕ್ಷ ಹಾಜಿ ಅಬ್ಬಾಸ್ ಡಿ. ಮಂಗಳೂರು ತಾಪಂ ಮಾಜಿ ಅಧ್ಯಕ್ಷ ಮುಹಮ್ಮದ್ ಮೋನು, ಬದ್ರಿಯಾ ಜುಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಆರ್. ಅಹ್ಮದ್ ಶೇಟ್, ಉಪಾಧ್ಯಕ್ಷರಾದ ಎಂ.ಎಚ್ ಬಾವು, ಬದ್ರಿಯಾ ಜುಮಾ ಮಸೀದಿಯ ಕಾರ್ಯದರ್ಶಿ ಅಬ್ದುರ್ರಶೀದ್ ಡಿ.ಎಂ. ದೇರಳಕಟ್ಟೆ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಕೋಶಾಧಿಕಾರಿ ಹಾಜಿ ಅಬ್ದುರ್ರಹ್ಮಾನ್ ಪನೀರ್, ಕೋಟೆಕಾರ್ ಪಟ್ಟಣ ಪಂಚಾಯತ್ ಮಾಜಿ ಕೌನ್ಸಿಲರ್ ಮುಹಮ್ಮದ್ ಡಿ.ಎಂ., ದೇರಳಕಟ್ಟೆ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ದಾರಿಮಿ, ಎಸ್ ವೈಎಸ್ ದೇರಳಕಟ್ಟೆ ಘಟಕದ ಉಪಾಧ್ಯಕ್ಷ ಮುಹಮ್ಮದ್ ಪನೀರ್, ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ ಅಧ್ಯಕ್ಷ ಹಾಜಿ ಇಲ್ಯಾಸ್ ಡಿ., ಬೆಳ್ಮ ಗ್ರಾಪಂ ಸದಸ್ಯರಾದ ಇಕ್ಬಾಲ್ ಎಚ್.ಆರ್., ಇಬ್ರಾಹೀಂ ಬದ್ಯಾರ್, ಹನೀಫ್ ಬದ್ಯಾರ್, ಬದ್ರಿಯಾ ಜುಮಾ ಮಸೀದಿಯ ಆಡಳಿತ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಡಿ., ಅಬ್ದುಲ್ಲತೀಫ್, ಅಬ್ಬಾಸ್, ನಾಸಿರ್ ಡಿ., ಕಲಂದರ್, ದೇರಳಕಟ್ಟೆ ವಲಯ ಪ್ರಧಾನ ಕಾರ್ಯದರ್ಶಿ ನೌಶಾದ್ ಬದ್ಯಾರ್, ಉಳ್ಳಾಲ ಕ್ಲಸ್ಟರ್ ಪ್ರಧಾನ ಕಾರ್ಯದರ್ಶಿ ಅರ್ಷದ್, ದೇರಳಕಟ್ಟೆ ಶಾಖೆಯ ಅಧ್ಯಕ್ಷ ಫೈಝಲ್ ಡಿ.ಎಂ., ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮುಂಶಿದ್, ಕೋಶಾಧಿಕಾರಿ ಮುಹಮ್ಮದ್ ಇರ್ಫಾನ್ ಮೊದಲಾದವರು ಉಪಸ್ಥಿತರಿದ್ದರು.