ಉಕ್ರೇನ್‌ ನಿಂದ ವಿದ್ಯಾರ್ಥಿಗಳನ್ನು ರಕ್ಷಿಸುತ್ತಿರುವುದು ಹೆಚ್ಚುತ್ತಿರುವ ಭಾರತದ ಪ್ರಭಾವಕ್ಕೆ ಸಾಕ್ಷಿ: ಪ್ರಧಾನಿ ಮೋದಿ

Update: 2022-03-06 12:00 GMT

ಪುಣೆ: ಯುದ್ಧ ಪೀಡಿತ ಉಕ್ರೇನ್‌ನಿಂದ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುತ್ತಿರುವುದು ವಿಶ್ವದಲ್ಲಿ ಭಾರತದ ಹೆಚ್ಚುತ್ತಿರುವ ಪ್ರಭಾವಕ್ಕೆ ಪುರಾವೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ರವಿವಾರ ಹೇಳಿದ್ದಾರೆ.

ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ನಂತರ, ಭಾರತ ಸರ್ಕಾರವು ಅಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಆಪರೇಷನ್ ಗಂಗಾವನ್ನು ಪ್ರಾರಂಭಿಸಿತು. ಇಲ್ಲಿಯವರೆಗೆ 1,000 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಉಕ್ರೇನ್‌ನಿಂದ ಸ್ಥಳಾಂತರಿಸಲಾಗಿದೆ ಎಂದು ಮೋದಿ ಹೇಳಿದರು.

"ಇತರ ದೇಶಗಳು ತನ್ನ ನಾಗರಿಕರನ್ನು ರಕ್ಷಿಸಲು ಕಷ್ಟಪಡುತ್ತಿರುವ ಸಮಯದಲ್ಲಿ, ನಾವು ನಮ್ಮ ಜನರನ್ನು ಹೊರತರುವಲ್ಲಿ ಯಶಸ್ವಿಯಾಗಿದ್ದೇವೆ. ಇದು ವಿಶ್ವದಲ್ಲಿ ಭಾರತದ ಹೆಚ್ಚುತ್ತಿರುವ ಪ್ರಭಾವವನ್ನು ಸಾಬೀತುಪಡಿಸುತ್ತದೆ ಎಂದು ಪುಣೆಯ ಸಿಂಬಯಾಸಿಸ್ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಮೋದಿ ಹೇಳಿದರು.

ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ರಕ್ಷಣಾತ್ಮಕ ಮತ್ತು ಅವಲಂಬಿತ ಮನಸ್ಥಿತಿಯ ಹೊರೆಯಾಗದಿರುವುದು ಅದೃಷ್ಟ ಎಂದು ಅವರು ಹೇಳಿದರು. ತಮ್ಮ ವೃತ್ತಿಜೀವನದ ಗುರಿಗಳನ್ನು ರಾಷ್ಟ್ರೀಯ ಮಹತ್ವಾಕಾಂಕ್ಷೆಗಳೊಂದಿಗೆ ಜೋಡಿಸುವಂತೆ ಮೋದಿ ವಿದ್ಯಾರ್ಥಿಗಳನ್ನು ಒತ್ತಾಯಿಸಿದರು. ನಮ್ಮ ದೈನಂದಿನ ಜೀವನದಲ್ಲಿ ಸದೃಢವಾಗಿರುವುದು ಮತ್ತು ಸಾಕಷ್ಟು ನಗುವುದು ಸಹ ಮುಖ್ಯವಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News