ಮಾ.9ರಂದು ಪವರ್ ಸಂಸ್ಥೆಯಿಂದ ಮಹಿಳಾ ದಿನಾಚರಣೆ
ಉಡುಪಿ, ಮಾ.7: ಉಡುಪಿ ಪವರ್ ಸಂಸ್ಥೆಯ ಆಶ್ರಯದಲ್ಲಿ ಚಾರ್ಟರ್ ಡೇ ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಣಿಪಾಲದ ಕಂಟ್ರಿ ಇನ್ ಸಭಾಂಗಣದಲ್ಲಿ ಮಾ.9ರಂದು ಸಂಜೆ 5.30ಕ್ಕೆ ನಡೆಯಲಿದೆ.
ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಚಿತ್ರನಟಿ ವಿನಯಾ ಪ್ರಸಾದ್ ಭಾಗವಹಿಸುವರು. ಇದೇ ಸಂದರ್ಭದಲ್ಲಿ ಮಹಿಳಾ ಸಾಧಕಿ ರಾಧಾ ದಾಸ್ ಕುಂಭಾಶಿ ಅವರನ್ನು ಸನ್ಮಾನಿಸ ಲಾಗುವುದು. ಅಲ್ಲದೆ ಪವರ್ ಸಂಸ್ಥೆಯ 2022-23ನೇ ಸಾಲಿನ ನೂತನ ಅಧ್ಯಕ್ಷೆ ಪೂನಂ ಶೆಟ್ಟಿ ನೇತೃತ್ವದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜರಗಲಿದೆ ಎಂದು ಸಂಸ್ಥೆಯ ಅಧ್ಯಕ್ಷೆ ತಾರಾ ತಿಮ್ಮಯ್ಯ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಪ್ರಿಯಾ ಕಾಮತ್, ಕೋಶಾಧಿ ಕಾರಿ ಶಾಲಿನಿ ಬಂಗೇರ, ನಿಯೋಜಿತ ಅಧ್ಯಕ್ಷೆ ಪೂನಂ ಶೆಟ್ಟಿ, ಕಾರ್ಯದರ್ಶಿ ಅರ್ಚನಾ ರಾವ್, ಕೋಶಾಧಿಕಾರಿ ಪ್ರತಿಭಾ ಆರ್.ವಿ., ಸಂಸ್ಥಾಪಕ ಅಧ್ಯಕ್ಷೆ ರೇಣು ಜಯರಾಮ್ ಉಪಸ್ಥಿತರಿದ್ದರು.