×
Ad

ಇನ್ನೊಂದು ಪ್ರಕರಣದಲ್ಲೂ ವಕೀಲ ಜಗದೀಶ್‍ಗೆ ಜಾಮೀನು

Update: 2022-03-07 18:52 IST

ಬೆಂಗಳೂರು, ಮಾ.7: ಕೊಡಿಗೇಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣದಲ್ಲಿ ವಕೀಲ ಜಗದೀಶ್ ಕೆ.ಎನ್. ಮಹಾದೇವ್ ಅವರಿಗೆ ನಗರದ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ನ್ಯಾಯಾಲಯದಲ್ಲಿ ನಡೆದಿದ್ದ ಗಲಾಟೆ ವೇಳೆ ವಕೀಲರೊಬ್ಬರ ಕೊಲೆಗೆ ಯತ್ನಿಸಿದ್ದ ಆರೋಪದಡಿ ಜಗದೀಶ್ ಅವರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಜಗದೀಶ್ ಅವರಿಗೆ ಇತ್ತೀಚೆಗಷ್ಟೇ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. 

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ಜಗದೀಶ್‍ಗೆ ಕೊಲೆ ಯತ್ನ ಪ್ರಕರಣದಲ್ಲಿ ಜಾಮೀನು ಸಿಕ್ಕರೂ ಜಾತಿ ನಿಂದನೆ ಪ್ರಕರಣದಿಂದಾಗಿ ಹೊರಗೆ ಬಂದಿರಲಿಲ್ಲ. ಕೊಡಿಗೇಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣದಲ್ಲೂ ಅವರಿಗೆ ಜಾಮೀನು ಸಿಕ್ಕಿದ್ದು, ಸದ್ಯದಲ್ಲೇ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಅರ್ಜಿದಾರ ಜಗದೀಶ್ ಪರ ವಕೀಲರಾದ ಹರೀಶ್ ಪ್ರಭು ಹಾಗೂ ಬಾಲನ್ ವಾದ ಮಂಡಿಸಿದ್ದರು. ವಕೀಲ ಜಗದೀಶ್ ಅವರು ಸದ್ಯಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. 

ಜಾತಿ ನಿಂದನೆ ಪ್ರಕರಣ: ಕುಮಾರಸ್ವಾಮಿ ಲೇಔಟ್ ನಿವಾಸಿ ಮುತ್ತಯ್ಯ ಎಂಬುವರು ವಕೀಲ ಜಗದೀಶ್ ವಿರುದ್ಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಆರೋಪ ಹೊರಿಸಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ವಕೀಲ ಜಗದೀಶ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. 

ಸಂತಸ: ವಕೀಲ ಜಗದೀಶ್ ಅವರಿಗೆ ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನು ಸಿಕ್ಕಿರುವ ವಿಚಾರ ಗೊತ್ತಾಗುತ್ತಿದ್ದಂತೆ ಜಗದೀಶ್ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಗಳನ್ನು ಹಾಕುವ ಮೂಲಕ ಜಗದೀಶ್ ವಾಪಸು ಬರಲಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News