ಭೋವಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಆರೋಪ: ಎಸಿಬಿ ತನಿಖೆಗೆ ಆದೇಶಿಸಲಾಗಿದೆ; ಸಚಿವ ಕೋಟಾ ಶ್ರೀನಿವಾಸ ಪೂಜಾರಿ

Update: 2022-03-07 13:58 GMT

ಬೆಂಗಳೂರು, ಮಾ.7: ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಎಸಿಬಿ ತನಿಖೆಗೆ ಆದೇಶಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ಸೋಮವಾರ ವಿಧಾನ ಪರಿಷತ್ತಿನ ಕಲಾಪದ ಪ್ರಶ್ನೋತ್ತರ ವೇಳೆ ಬಿಜೆಪಿಯ ಸುನೀಲ್ ವಲ್ಯಾಪುರೆ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ನಿಗಮದ ಪ್ರಧಾನ ವ್ಯವಸ್ಥಾಪಕ, ಪ್ರಧಾನ ನಿರ್ದೇಶಕ ಮತ್ತು ಕಚೇರಿ ವ್ಯವಸ್ಥಾಪಕರ ಮೇಲೆ ಹಲವು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ. ಆದರೆ, ಅವರು ಕೆಎಟಿಗೆ ಹೋಗಿ ತಡೆಯಾಜ್ಞೆ ತಂದಿದ್ದಾರೆ. ಇದನ್ನು ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. 

ಭೋವಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರದ ಹಿನ್ನೆಲೆಯಲ್ಲಿ ಯಾರೊಬ್ಬರನ್ನು ರಕ್ಷಣೆ ಮಾಡುವ ಉದ್ದೇಶ ಸರಕಾರಕ್ಕೆ ಇಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News