×
Ad

ದ್ವಿತೀಯ ಪಿಯುಸಿ ಪರೀಕ್ಷೆ: ಅಂತಿಮ ವೇಳಾಪಟ್ಟಿ ಪ್ರಕಟ

Update: 2022-03-07 21:36 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.7: 2021-22ನೆ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯು ಸೋಮವಾರ ಪ್ರಕಟಿಸಿ ಆದೇಶ ಹೊರಡಿಸಿದೆ. 

ಅಂತಿಮ ವೇಳಾಪಟ್ಟಿಯಂತೆ ದ್ವಿತೀಯ ಪಿಯುಸಿ ಪರೀಕ್ಷೆಯು ಎ.22ರಿಂದ ಮೇ 18ರವರೆಗೆ ಬೆಳಗ್ಗೆ 10.15ರಿಂದ 1.30ರವರೆಗೆ ನಡೆಯಲಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.

ಎ.22 ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಎ.23ರಂದು ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ ಪರೀಕ್ಷೆ, ಎ.25 ರಂದು ಅರ್ಥಶಾಸ್ತ್ರ, ಎ.26ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ ಪರೀಕ್ಷೆ ನಡೆಯಲಿದೆ. ಎ.27 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಭಾಷಾ ಪರೀಕ್ಷೆಗಳು ನಡೆಯುತ್ತವೆ.

ಎ.28 ರಂದು ಕನ್ನಡ ಹಾಗೂ ಅರೇಬಿಕ್ ಭಾಷೆ ಪರೀಕ್ಷೆ ನಡೆಸಲಾಗುವುದು. 

ಮೇ 2 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ, ಮೇ 4 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‍ನೆಸ್, ಮೇ 5ರಂದು ಇಂಗ್ಲಿಷ್ ಭಾಷೆ ಪರೀಕ್ಷೆ ನಡೆಯಲಿದೆ. 

ಮೇ 10 ರಂದು ಇತಿಹಾಸ, ಭೌತಶಾಸ್ತ್ರ, ಮೇ 12ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ ನಡೆಯಲಿದೆ. ಮೇ 14ರಂದು ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ ನಡೆಯಲಿದೆ. ಮೇ 17ರಂದು ಐಚ್ಛಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ, ಮೇ 18ರಂದು ಹಿಂದಿ ಪರೀಕ್ಷೆ ನಡೆಯಲಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News