ಉಕ್ರೇನಿನ ಶವಾಗಾರದಲ್ಲಿ ನವೀನ್ ಮೃತದೇಹ ಇಡಲಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ
Update: 2022-03-08 11:28 IST
ಬೆಂಗಳೂರು: ‘ರಶ್ಯಾ ದಾಳಿ ಹಿನ್ನೆಲೆಯಲ್ಲಿ ಉಕ್ರೇನ್‍ನಲ್ಲಿ ಮೃತಪಟ್ಟ ಕರ್ನಾಟಕ ರಾಜ್ಯದ ಹಾವೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹವನ್ನು ಉಕ್ರೇನಿನ ಶವಾಗಾರದಲ್ಲಿ ಇಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಜೈಶಂಕರ್ ಅವರ ಜೊತೆ ಮಾತಾಡಿದ್ದೇನೆ. ನವೀನ್ ಮೃತದೇಹ ಸಿಕ್ಕಿದ್ದು, ಶವಾಗಾರದಲ್ಲಿ ಇಡಲಾಗಿದೆ. ಯುದ್ಧ ಇನ್ನೂ ನಡೀತಿದೆ. ರಾಯಭಾರಿ ಕಚೇರಿ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದೇವೆ. ಮೃತದೇಹ ತರುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಸಿಎಂ ಹೇಳಿದ್ದಾರೆ.