×
Ad

ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್‌ನಲ್ಲಿ ಅರೆಸೈನಿಕ ಪಡೆ ಸೇರಿಕೊಂಡ ತಮಿಳುನಾಡಿನ ವಿದ್ಯಾರ್ಥಿ

Update: 2022-03-08 11:38 IST
 ಸೈನಿಕೇಶ್ ರವಿಚಂದ್ರನ್ (Photo: India Today)

ಚೆನ್ನೈ: ತಮಿಳುನಾಡಿನ(Tamil Nadu) ಕೊಯಮತ್ತೂರು ಜಿಲ್ಲೆಯ 21 ವರ್ಷದ ವಿದ್ಯಾರ್ಥಿ ಸೈನಿಕೇಶ್ ರವಿಚಂದ್ರನ್ (Sainikesh Ravichandran) ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್‌ನಲ್ಲಿ ಅರೆಸೈನಿಕ ಪಡೆಗಳನ್ನು ಸೇರಿಕೊಂಡಿದ್ದಾರೆ ಎಂದು India Today ವರದಿ ಮಾಡಿದೆ.

ಅಧಿಕಾರಿಗಳು ಸೈನಿಕೇಶ್ ಅವರ ನಿವಾಸಕ್ಕೆ ಭೇಟಿ ನೀಡಿ ಪೋಷಕರನ್ನು ವಿಚಾರಿಸಿದ್ದಾರೆ. ಸೈನಿಕೇಶ್ ಭಾರತೀಯ ಸೇನೆಗೆ ಸೇರಲು ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಅರ್ಜಿ ತಿರಸ್ಕರಿಸಲಾಗಿತ್ತು ಎಂಬ ವಿಚಾರವನ್ನು ತಿಳಿದುಕೊಂಡರು.

2018 ರಲ್ಲಿ ಸೈನಿಕೇಶ್ ಖಾರ್ಕಿವ್‌ನಲ್ಲಿರುವ ನ್ಯಾಷನಲ್ ಏರೋಸ್ಪೇಸ್ ವಿಶ್ವ ವಿದ್ಯಾಲಯದಲ್ಲಿ ಅಧ್ಯಯನ ಮಾಡಲು ಉಕ್ರೇನ್‌(Ukraine)ಗೆ ತೆರಳಿದ್ದರು. ಅವರು ಜುಲೈ 2022 ರೊಳಗೆ ಕೋರ್ಸ್ ಅನ್ನು ಪೂರ್ಣಗೊಳಿಸಬೇಕಿತ್ತು.

ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಅವರ ಕುಟುಂಬವು ಸೈನಿಕೇಶ್‌ನೊಂದಿಗೆ ಸಂಪರ್ಕವನ್ನು ಕಳೆದುಕೊಂಡಿತ್ತು. ರಾಯಭಾರ ಕಚೇರಿಯ ಸಹಾಯವನ್ನು ಕೋರಿದ ನಂತರ  ಅವರು ಸಾಯಿಕೇಶ್ ಅವರನ್ನು ಸಂಪರ್ಕಿಸಲು ಸಾಧ್ಯವಾಯಿತು. ರಷ್ಯಾದ ವಿರುದ್ಧ ಹೋರಾಡಲು ಉಕ್ರೇನಿಯನ್ ಅರೆಸೈನಿಕ ಪಡೆಗಳನ್ನು ಸೇರಿಕೊಂಡಿರುವುದಾಗಿ ಸೈನಿಕೇಶ್  ತಮ್ಮ ಕುಟುಂಬಕ್ಕೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಉಕ್ರೇನಿನ ಶವಾಗಾರದಲ್ಲಿ ನವೀನ್ ಮೃತದೇಹ ಇಡಲಾಗಿದೆ: ಸಿಎಂ ಬೊಮ್ಮಾಯಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News