ಗದಗ: ಅರಣ್ಯ ಇಲಾಖೆ ಅಧಿಕಾರಿಗಳ ತೆರವು ಕಾರ್ಯಾಚರಣೆ ವಿರೋಧಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಮೃತ್ಯು

Update: 2022-03-08 07:21 GMT
                               ಮೃತ ಮಹಿಳೆ ನಿರ್ಮಲಾ ರಾಮನಗೌಡ ಪಾಟೀಲ್

ಮುಂಡರಗಿ: ಬಗರ್ ಹುಕುಂ ಜಮೀನಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ನಡೆಸುತ್ತಿರುವ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು, ಈ ವೇಳೆ  ಅಧಿಕಾರಿಗಳ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಇಬ್ಬರು ರೈತ ಮಹಿಳೆಯರ ಪೈಕಿ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. 

ಮೃತ ಮಹಿಳೆನ್ನು ಮುಂಡರಗಿಯ ಕೆಲೂರ ಗ್ರಾಮದ ನಿರ್ಮಲಾ ರಾಮನಗೌಡ ಪಾಟೀಲ್ ಎಂದು ಗುರುತಿಸಲಾಗಿದೆ.

ಸೋಮವಾರ ಅರಣ್ಯ ಇಲಾಖೆ ಅಧಿಕಾರಿಗಳು ಮುಂಡರಗಿಯ ಕೆಲೂರ ಗ್ರಾಮದಲ್ಲಿ ಬಗರ್ ಹುಕುಂ ಸಾಗುವಳಿ ಜಮೀನಿನಲ್ಲಿ ಟ್ರೆಂಚ್ ಹಾಕುವುದಕ್ಕೆ ಮುಂದಾದಾಗ ಮಹಿಳೆಯರಾದ ಸರೋಜವ್ವ, ನಿರ್ಮಲಾ ಪಾಟೀಲ್ ವಿಷ ಸೇವಿಸಿದ್ದು, ಈ  ವೇಳೆ ಅಸ್ವಸ್ಥರಾದ ಮಹಿಳೆಯರನ್ನು ಮುಂಡರಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಿರ್ಮಲಾ ಪಾಟೀಲ್ ಎಂಬ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಇನ್ನೋರ್ವ ಮಹಿಳೆಗೆ ಗದಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದೆ ಎಂದು ತಿಳಿದು ಬಂದಿದೆ.

ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News