ಪ್ರಧಾನಿ ಭೇಟಿಗೆ ದಿಲ್ಲಿಗೆ ದೌಡಾಯಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ಹೊಸದಿಲ್ಲಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ರಾಜ್ಯ ಚುನಾವಣಾ ಫಲಿತಾಂಶಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ದಿಲ್ಲಿಗೆ ತೆರಳಿದ್ದಾರೆ.
ಫೆಬ್ರುವರಿ 14 ರಂದು ಮತದಾನ ನಡೆದ ಗೋವಾದಲ್ಲಿ ಅತಂತ್ರ ಫಲಿತಾಂಶ ಹೊರಬೀಳಲಿದೆ ಎಂದು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಸಾವಂತ್ ಗೋವಾದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳುವ ಪಕ್ಷದ ಸಾಮರ್ಥ್ಯದ ಬಗ್ಗೆ ಪ್ರಧಾನಿಗೆ ವಿವರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
2019 ರಲ್ಲಿ ವರ್ಚಸ್ವಿ ಮಾಜಿ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಅವರ ನಿಧನದ ನಂತರ ಕಡಲತೀರದ ರಾಜ್ಯದಲ್ಲಿ ಬಿಜೆಪಿ ಎದುರಿಸಿದ ಮೊದಲ ಚುನಾವಣೆ ಇದಾಗಿದೆ.
ಸೋಮವಾರ ಮತದಾನ ಮುಗಿದ ನಂತರ ನಡೆದ ಎಕ್ಸಿಟ್ ಪೋಲ್ ಸಮೀಕ್ಷೆಗಳು ಗೋವಾದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇದೆ ಎಂದಿದ್ದವು.
ಎನ್‌ಡಿಟಿವಿ ಸಮೀಕ್ಷೆಯ ಪ್ರಕಾರ, ಬಿಜೆಪಿ ಹಾಗೂ ಕಾಂಗ್ರೆಸ್ ರಾಜ್ಯದ 40 ಸ್ಥಾನಗಳಲ್ಲಿ ತಲಾ 16 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದಿದೆ. ಬಹುಮತಕ್ಕೆ 21 ಸ್ಥಾನದ ಅಗತ್ಯವಿದೆ.