×
Ad

ವಿವಾದಾತ್ಮಕ ಹೇಳಿಕೆ ಪ್ರಕರಣ: ಕಲಬುರಗಿಯ ಕಾಂಗ್ರೆಸ್ ಮುಖಂಡ‌ ಮುಕ್ರಂ ಖಾನ್ ಬಂಧನ

Update: 2022-03-08 13:35 IST

ಕಲಬುರಗಿ: 'ಹಿಜಾಬ್ ತಂಟೆಗೆ ಬಂದರೆ ತುಂಡು ತುಂಡು ಮಾಡ್ತೇವೇ' ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್​ ಅವರನ್ನು ಹೈದರಾಬಾದ್​ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಜಿಲ್ಲಾ ನ್ಯಾಯಾಲಯವು ಮುಕ್ರಂ ಖಾನ್ ಜಾಮೀನು ಅರ್ಜಿಯನ್ನ ವಜಾಗೊಳಿಸಿ ಆದೇಶಿಸಿತ್ತು. ಈ ಬೆನ್ನಲ್ಲೇ ಪೊಲೀಸರು ಹೈದರಾಬಾದ್​ನಲ್ಲಿ ಮುಕ್ರಂ ಖಾನ್​ನನ್ನು ವಶಕ್ಕೆ ಪಡೆದಿದ್ದಾರೆ. 

ಬಳಿಕ ಅನಾರೋಗ್ಯ ಹಿನ್ನೆಲೆ ಅವರನ್ನು ಹೈದರಾಬಾದ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಫೆ 16 ರಂದು ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News