ಅಪ್ರಾಪ್ತ ಬಾಲಕಿಯರನ್ನು ಬ್ಲಾಕ್ ಮೇಲ್ ಮಾಡಿ ವೇಶ್ಯಾವಾಟಿಕೆ ದಂಧೆ; ಮತ್ತೆ ನಾಲ್ವರು ಆರೋಪಿಗಳ ಬಂಧನ
ಮಂಗಳೂರು, ಮಾ.8: ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿ ನೀಡಿದ ದೂರಿನ ಮೇರೆಗೆ ನಗರದಲ್ಲಿ ವೇಶ್ಯಾವಾಟಿಕೆ ಜಾಲವೊಂದನ್ನು ಭೇಧಿಸಿ ಈಗಾಗಲೇ 5 ಪ್ರತ್ಯೇಕ ಪೋಕ್ಸೋ ಪ್ರಕರಣಡಿ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಮತ್ತೋರ್ವ ಅಪ್ರಾಪ್ತೆ ಸಂತ್ರಸ್ತೆ ನೀಡಿರುವ ದೂರಿಗೆ ಸಂಬಂಧಿಸಿ ಮತ್ತೆ 5 ಪ್ರಕರಣಗಳಡಿ ಮತ್ತೆ ನಾಲ್ಕು ಮಂದಿ ಆರೋಪಿಗಳನ್ನುಬಂಧಿಸಲಾಗಿದೆ.
ವೇಶ್ಯಾವಾಟಿಕೆ ಪ್ರಕರಣಕ್ಕೆ ಸಂಬಂಧಿಸಿ ಈ ಮೂಲಕ ಇಬ್ಬರು ಅಪ್ರಾಪ್ತೆಯರು ನೀಡಿರುವ ದೂರಿನ ಮೇರೆಗೆ ಒಟ್ಟು 10 ಪ್ರಕರಣಗಳು ದಾಖಲಾಗಿದೆ. (ಎರಡನೆ ಅಪ್ರಾಪ್ತೆ ದೂರಿನಲ್ಲಿಯೂ ಒಟ್ಟು 10 ಮಂದಿ ಆರೋಪಿಗಳಿದ್ದು, ಇದರಲ್ಲಿ ಆರು ಮಂದಿ ಆರೋಪಿಗಳು ಮೊದಲಿನ ಪ್ರಕರಣದಲ್ಲಿ ಈಗಾಗಲೇ ಬಂಧಿಸಿರುವ ಆರೋಪಿಗಳಾಗಿದ್ದಾರೆ) ಇನ್ನೂ ಕೆಲ ಆರೋಪಿಗಳು ತಲೆಮರೆಸಿಕೊಂಡಿದ್ದು, ಎಲ್ಲಾ ತಾಂತ್ರಿಕ ವಿಶ್ಲೇಷಣೆಯನ್ನೂ ನಡೆಸಲಾಗುತ್ತಿದೆ. ಎಸಿಪಿ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳ ಮೊಬೈಲ್, ಎಲ್ಲಾ ರೀತಿಯ ಗೆಜೆಟ್‌ಗಳ ಪರಿಶೀಲನೆಯನ್ನೂ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು.