ಮಾ.11-13: ಸವಣೂರಿನಲ್ಲಿ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ
ಪುತ್ತೂರು: ತಾಲೂಕಿನ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಮಾ.11ರಿಂದ 13ರ ತನಕ ರಾಷ್ಟ್ರ ಮಟ್ಟದ ಆಯ್ದ ವಿಶ್ವವಿದ್ಯಾಲಯಗಳ ಪುರಸರ ಹಾಗೂ ಮಹಿಳೆಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನಡೆಯಲಿದೆ ಎಂದು ಪಂದ್ಯಾಟ ಸಮಿತಿಯ ಗೌರವ ಅಧ್ಯಕ್ಷ ಕೆ. ಸೀತಾರಾಮ ರೈ ಸವಣೂರು ಮತ್ತು ದ.ಕ.ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಅಧ್ಯಕ್ಷ ಸತೀಶ್ ಕುಮಾರ್ ಬಿ.ಎಸ್ ತಿಳಿಸಿದ್ದಾರೆ.
ಅವರು ಮಂಗಳವಾರ ಪುತ್ತೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪಂದ್ಯಾಟದಲ್ಲಿ ಆಯ್ದ ವಿಶ್ವವಿದ್ಯಾಲಗಳ ಪುರುಷರ 6 ತಂಡ ಮತ್ತು ಆಹ್ವಾನಿತ ಮಹಿಳೆಯರ 4 ತಂಡಗಳು ಭಾಗವಹಿಸಲಿದೆ. ಕೇರಳ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯದ ತಂಡಗಳು ಭಾಗವಹಿಸಲಿದೆ.
ಮಾ.11ರಂದು ಸಂಜೆ ದ.ಕ.ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಗೌರವ ಅಧ್ಯಕ್ಷ ಸುರೇಶ್ ಬಾಬು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ. ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕ್ರೀಡಾಂಗಣ ಉದ್ಘಾಟಿಸಲಿದ್ದಾರೆ. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ ಮತ್ತು ಮಹಾಲಿಂಗ ನಾಯ್ಕ ಅಮೈ ಅವರನ್ನು ಸನ್ಮಾನಿಸಲಾಗುವುದು.
ಮಾ.12ರಂದು ಸಂಜೆ ಮಹಿಳೆಯರ ವಿಭಾಗದ ಪಂದ್ಯಾಟ ನಡೆಯಲಿದ್ದು, ಸಭಾ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದಾರೆ. ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಶಾಸಕ ಸಂಜೀವ ಮಠಂದುರು, ಮಾಜಿ ಸಚಿವರಾದ ಬಿ. ರಮಾನಾಥ ರೈ, ವಿನಯ ಕುಮಾರ್ ಸೊರಕೆ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು.
ಮಾ.13ರಂದು ಸಂಜೆ ಮಹಿಳೆಯರ ವಿಭಾಗದ ಪಂದ್ಯಾಟದ ಸಭಾ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಸವಣೂರು ಗ್ರಾಪಂ ಅಧ್ಯಕ್ಷೆ ರಾಜೀವಿ ವಿ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಕ್ರೀಡಾ ಸಾಧಕರಾದ ಅಮನ್. ಪ್ರಕಾಶ್ ಶೆಟ್ಟಿ ಹೆಜಮಾಡಿ, ರವೀಂದ್ರ , ಪಿ.ಸಿ. ಸತೀಶ್, ಪ್ರಕಾಶ್ ರಾವ್, ದಾಮೋದರ ಶೆಟ್ಟಿ, ಸುನಿಲ್ ಬಾಳಿಗಾ, ಉಷಾ ರಾಜಾರಾಮ್, ರೋಹಿತ್ ಕುಮಾರ್ ಕಟೀಲ್, ಅಶ್ವಲ್ ರೈ, ಪ್ರಶಾಂತ ರೈ ಕೈಕಾರ, ಗಣೇಸ್ ರೈ ಮುಂಡಾಸು, ಸತ್ತಾರ್ ಗೂಡಿನಬಳಿ, ಧೋಮಸ್ ಧರ್ಮಸ್ಥಳ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಬಳಿಕ ಪಂದ್ಯಾಟ ಸಮಿತಿ ಅಧ್ಯಕ್ಷ ಬೇಬಿ ಜೋನ್ ಅಧ್ಯಕ್ಷತೆಯಲ್ಲಿ ಬಹುಮಾನ್ ವಿತರಣೆ ನಡೆಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪಂದ್ಯಾಟ ಸಮಿತಿ ಅಧ್ಯಕ್ಷ ಬೇಬಿ ಜೋನ್ ಕೂಡುರಸ್ತೆ, ಉಪಾಧ್ಯಕ್ಷ ಶಿವರಾಮ ಭಟ್, ಉಸ್ತುವಾರಿ ಜಯರಾಮ ಗೌಡ ಉಪಸ್ಥಿತರಿದ್ದರು.