×
Ad

ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿದೇಶಿ ಕರೆನ್ಸಿ ವಶ

Update: 2022-03-08 21:33 IST

ಮಂಗಳೂರು, ಮಾ.8: ಮಂಗಳೂರು ಅಂ.ರಾ. ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 25.17 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳವಾರ ಒಬ್ಬ ಪ್ರಯಾಣಿಕ ಮಂಗಳೂರಿನಿಂದ ದುಬೈಗೆ ಏರ್ ಇಂಡಿಯಾ ವಿಮಾನದಲ್ಲಿ 90,000 ಯುಎಇ ಧೀರಮ್ಸ್ (17,77,500 ರೂ. ಮೌಲ್ಯ) ವಿದೇಶಿ ಕರೆನ್ಸಿ ಸಾಗಾಟ ಮಾಡಲು ಯತ್ನಿಸಿದ್ದ. ಬ್ಯಾಗ್ ಪರಿಶೀಲನೆ ನಡೆಸಿದಾಗ ಅಕ್ರಮ ಸಾಗಾಟ ಪತ್ತೆಯಾಗಿದೆ.

ಇನ್ನೊಂದು ಪ್ರಕರಣದಲ್ಲಿ ಕೇರಳದ ಪ್ರಯಾಣಿಕನೋರ್ವನ ಬಳಿಯಿಂದ ರವಿವಾರ 7,40,500 ರೂ. ಮೌಲ್ಯದ ಯುಎಸ್‌ಡಿ 10,000 ವಶಕ್ಕೆ ಪಡೆಯಲಾಗಿದೆ. ಈತ ಮಂಗಳೂರಿನಿಂದ ಶಾರ್ಜಾಕ್ಕೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಲು ಬಂದಿದ್ದ ಎನ್ನಲಾಗಿದೆ.

ಎರಡೂ ಪ್ರಕರಣಗಳಲ್ಲಿ ಆರೋಪಿಗಳನ್ನು ಹಾಗು ವಿದೇಶಿ ನೋಟುಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News