×
Ad

ಗೋವಾ: ಕಾಂಗ್ರೆಸ್ ಅಭ್ಯರ್ಥಿಗಳು ರೆಸಾರ್ಟ್ ಗೆ ತೆರಳಿದ ಬಳಿಕ ತನ್ನ ಅಭ್ಯರ್ಥಿಗಳನ್ನು ಕಾವಲು ಕಾಯಲು ಮುಂದಾದ ಆಪ್

Update: 2022-03-09 13:03 IST
Photo:twitter

ಪಣಜಿ: ಗೋವಾದಲ್ಲಿ ಕಾಂಗ್ರೆಸ್ ತನ್ನ 37 ಶಾಸಕ ಅಭ್ಯರ್ಥಿಗಳನ್ನು ರೆಸಾರ್ಟ್‌ಗೆ ಸ್ಥಳಾಂತರಿಸಿದ ಒಂದು ದಿನದ ನಂತರ  ಆಮ್ ಆದ್ಮಿ ಪಕ್ಷವೂ ತನ್ನ ಅಭ್ಯರ್ಥಿಗಳನ್ನು ಕಾವಲು ಕಾಯಲು ಮುಂದಾಗಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ಎಎಪಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗೋವಾದಲ್ಲಿ ಅತಂತ್ರ ಫಲಿತಾಂಶ ಬರಲಿದೆ . ಬಿಜೆಪಿಯೊಂದಿಗೆ ಕಾಂಗ್ರೆಸ್ ತೀವ್ರ ಪೈಪೋಟಿ ನಡೆಸಲಿದೆ ಎಂದು ಎಕ್ಸಿಟ್ ಪೋಲ್ ಗಳಲ್ಲಿ ಗೊತ್ತಾಗಿದೆ.  2017 ರಲ್ಲಿ ಆಗಿರುವ ಬೆಳವಣಿಗೆ  ಪುನರಾವರ್ತನೆಯಾಗುವುದನ್ನು ತಪ್ಪಿಸಲು ಆಪ್ ಹಾಗೂ  ಕಾಂಗ್ರೆಸ್ ಎರಡೂ ತಮ್ಮ ಅಭ್ಯರ್ಥಿಗಳನ್ನು ರಕ್ಷಿಸಿಕೊಳ್ಳಲು ಮುಂದಾಗಿವೆ.

ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಉತ್ತರ ಗೋವಾದ ರೆಸಾರ್ಟ್‌ಗೆ ಸ್ಥಳಾಂತರಿಸಿದೆ ಎಂದು ವರದಿಯಾಗಿದೆ.  ಅವರು ಗುರುವಾರ  ಮತ ಎಣಿಕೆ ಮುಗಿದು ಫಲಿತಾಂಶ ಹೊರಬೀಳುವವರೆಗೆ ಅಲ್ಲಿಯೇ ಇರುತ್ತಾರೆ.

ಎಕ್ಸಿಟ್ ಪೋಲ್‌ಗಳು ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್‌ಗೆ ಮೂರು ಸ್ಥಾನಗಳು ಸಿಗಲಿವೆ ಎಂದು  ಭವಿಷ್ಯ ನುಡಿದಿವೆ.

ಆಮ್ ಆದ್ಮಿ ಪಕ್ಷಕ್ಕೆ ಯಾವುದೇ ಸ್ಥಾನ ಸಿಗದು  ಎಂದು ಎಕ್ಸಿಟ್ ಪೋಲ್‌ಗಳು ಹೇಳಿವೆ. ಆದರೆ ಕಳೆದ ಬಾರಿಯ ಫಲಿತಾಂಶವನ್ನು ಗಮನಿಸಿದರೆ ಕಾಂಗ್ರೆಸ್ ಯಾವುದೇ ಅವಕಾಶವನ್ನು ಬಿಟ್ಟುಕೊಡಲು ಸಿದ್ಧವಿಲ್ಲ.

ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಮುನ್ನ ಗೋವಾದಲ್ಲಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ  ತಮ್ಮ ಪಕ್ಷವು "ಅಭ್ಯರ್ಥಿಗಳನ್ನು ಕದಿಯುವವರ" ವಿರುದ್ಧ ಕಾವಲು ಕಾಯುತ್ತಿದೆ ಎಂದು NDTVಗೆ ಹೇಳಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News