ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಗೆ ಜೀವ ಬೆದರಿಕೆ: ದೂರು ದಾಖಲು
Update: 2022-03-09 16:27 IST
ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ದೂರು ದಾಖಲಾಗಿದೆ.
ಹರ್ಷ ಹತ್ಯೆ ಪ್ರಕರಣ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಈ ಹಿನ್ನಲೆಯಲ್ಲಿ ಫೆ.21ರಂದು ಬೆದರಿಕೆಯ ಕರೆ ಬಂದಿದೆ. ಮುಸ್ತಾಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶವನ್ನು ಪ್ರಕಟಿಸಿದ್ದಾನೆ ಎಂದು ದೂರಲಾಗಿದೆ.
ಈ ಬಗ್ಗೆ ಡಿ.ಎಸ್.ಅರುಣ್ ಅವರ ಆಪ್ತ ಸಹಾಯಕ ವಾಗೀಶ್ ಅವರು ಜಿಲ್ಲಾ ರಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ. ಅಲ್ಲದೆ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ.
ಬೆದರಿಕೆ ಕುರಿತು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.