×
Ad

​ಕಾರ್ಕಳ: ಯಕ್ಷರಂಗಾಯಣಕ್ಕೆ ಶಂಕುಸ್ಥಾಪನೆ

Update: 2022-03-09 19:29 IST

ಉಡುಪಿ, ಮಾ.9: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ರಾಜ್ಯದ ಆರನೇ ರಂಗಾಯಣವಾಗಿ ‘ಯಕ್ಷರಂಗಾಯಣ’ಕ್ಕೆ ಶಂಕು ಸ್ಥಾಪನೆ ಮಾ.10ರಂದು ಬೆಳಗ್ಗೆ 8:00ಗಂಟೆಗೆ ಕಾರ್ಕಳ ಕೋಟಿ ಚೆನ್ನಯ್ಯ ಥೀಮ್ ಪಾರ್ಕ್‌ನಲ್ಲಿ ನೆರವೇರಲಿದೆ.

ಇದರೊಂದಿಗೆ ಕೋಟಿ ಚೆನ್ನಯ್ಯ ಥೀಮ್ ಪಾರ್ಕ್‌ನ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಕಾರ್ಕಳ ಉತ್ಸವದಲ್ಲಿ ಹೆಲಿಕಾಪ್ಟರ್ ವಿಹಾರದ ಉದ್ಘಾಟನೆಯೂ  ಕೋಟಿ ಚೆನ್ನಯ್ಯ ಥೀಮ್ ಪಾರ್ಕ್ ಹಾಗೂ ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.

ಯಕ್ಷರಂಗಾಯಣದ ಶಂಕು ಸ್ಥಾಪನೆ ಹಾಗೂ ಕೋಟಿ ಚೆನ್ನಯ್ಯ ಥೀಮ್ ಪಾರ್ಕ್‌ನ ವಿವಿಧ ಅಭಿವೃದ್ಧಿ ಕಾಮಗಾರಿ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿರುವರು. ದ.ಕ.ದ ಉಸ್ತುವಾರಿ ಸಚಿವ ಹಾಗೂ ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೆಲಿಕಾಪ್ಟರ್ ವಿಹಾರವನು್ನ ಉದ್ಘಾಟಿಸಿ ಅಧ್ಯಕ್ಷತೆ ವಹಿಸಲಿದ್ದಾರೆ.

ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News