×
Ad

ಉಡುಪಿ: ಕಾರ್ಮಿಕ ಇಲಾಖೆಯ ಮಾಹಿತಿ ರಥಕ್ಕೆ ಚಾಲನೆ

Update: 2022-03-09 19:34 IST

ಉಡುಪಿ, ಮಾ.9: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಮಾ.7ರಿಂದ 13ರವರೆಗೆ ಸಾಂಪ್ರದಾಯಿಕ ವಾರವನ್ನಾಗಿ ಆಚರಿಸಲು ನಿರ್ಧರಿಸಿದ್ದು, ಈ ಹಿನ್ನಲೆಯಲ್ಲಿ ವಾರದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ನೋಂದಣಿ, ನವೀಕರಣ ಹಾಗೂ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಯೋಜನೆಗಳ ಅರಿವು ಮೂಡಿಸಲು ಸಮಗ್ರ ಮಾಹಿತಿ ಹೊಂದಿರುವ ತೆರೆದ ರಥದ ವಾಹನಕ್ಕೆ ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್., ನಗರಸಭೆಯ ಅಧ್ಯಕ್ಷೆ ಸುಮಿತ್ರಾ ನಾಯಕ್, ಕಾರ್ಮಿಕ ಅಧಿಕಾರಿ ಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News