ಮಂಗಳೂರಿನ ಪಚ್ಚನಾಡಿ ಘನತ್ಯಾಜ್ಯ ತೆರವಿಗೆ ಮುಖ್ಯಮಂತ್ರಿಯಿಂದ ಅನುಮೋದನೆ: ಹೈಕೋರ್ಟ್ ಗೆ ಹೇಳಿಕೆ

Update: 2022-03-09 14:41 GMT
 ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕ

ಬೆಂಗಳೂರು, ಮಾ.9: ಮಂಗಳೂರಿನ ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕದಲ್ಲಿ ಹಲವು ವರ್ಷಗಳಿಂದ ಸಂಗ್ರಹವಾಗಿರುವ ಘನತ್ಯಾಜ್ಯ ಸ್ಥಳಾಂತರಿಸುವ ಕಾಮಗಾರಿಗೆ ಮುಖ್ಯಮಂತ್ರಿ ಅನುಮೋದನೆ ನೀಡಿದ್ದಾರೆ ಎಂದು ಹೈಕೋರ್ಟ್‍ಗೆ ರಾಜ್ಯ ಸರಕಾರ ತಿಳಿಸಿದೆ.  

ಪಚ್ಚನಾಡಿಯ ಘನತ್ಯಾಜ್ಯ ಭೂಭರ್ತಿ ಘಟಕ ಕುಸಿತ ದುರ್ಘಟನೆಗೆ ಸಂಬಂಧಿಸಿದಂತೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಸರಕಾರದ ಪರ ವಾದಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಅವರು, ಪಚ್ಚನಾಡಿ ಘನತ್ಯಾಜ್ಯ ಸ್ಥಳಾಂತರಿಸುವ ಹಿನ್ನೆಲೆಯಲ್ಲಿ ಸಿಎಂ ಅವರು 73 ಕೋಟಿ ರೂ.ಯೋಜನೆಗೆ ಅನುಮೋದನೆ ನೀಡಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ಈ ಕುರಿತಂತೆ ಪ್ರಮಾಣ ಪತ್ರ ಸಲ್ಲಿಸಬೇಕು. ಪಚ್ಚನಾಡಿ ಘನತ್ಯಾಜ್ಯ ಸ್ಥಳಾಂತರ ಬಗ್ಗೆ ಕಾಲಕಾಲಕ್ಕೆ ವರದಿಯನ್ನು ಸಲ್ಲಿಸಬೇಕೆಂದು ಹೈಕೋರ್ಟ್ ತಿಳಿಸಿದೆ. 

ಹಾಜರಾಗುವ ಅವಶ್ಯಕತೆ ಇಲ್ಲ: ಅರ್ಜಿಯ ಮುಂದಿನ ವಿಚಾರಣೆಗೆ ಮಂಗಳೂರು ಪಾಲಿಕೆ ಆಯುಕ್ತರು ಹಾಜರಾಗುವ ಅವಶ್ಯಕತೆ ಇಲ್ಲ ಎಂದು ನ್ಯಾಯಪೀಠ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News