ಎಲ್‍ಎಸ್‍ಡಿ ಕಾಯಿಲೆ: ಹಣ ಬಿಡುಗಡೆಗೆ ಹೈಕೋರ್ಟ್ ಸೂಚನೆ

Update: 2022-03-09 14:55 GMT

ಬೆಂಗಳೂರು, ಮಾ.9: ಅಪರೂಪದ ಅನುವಂಶೀಯ ಕಾಯಿಲೆ ಲೈಸೋಸೋಮಲ್ ಸ್ಟೋರೇಜ್ ಡಿಸಾರ್ಡರ್‍ನಿಂದ(ಎಲ್‍ಎಸ್‍ಡಿ) ಬಳಲುತ್ತಿರುವ ಮಕ್ಕಳ ಚಿಕಿತ್ಸೆಗಾಗಿ ಕೇಂದ್ರ ಸರಕಾರ ಠೇವಣಿ ಇರಿಸಿರುವ 3 ಕೋಟಿ ರೂ.ಗಳನ್ನು ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ(ಐಜಿಐಸಿಎಚ್) ಬಿಡುಗಡೆ ಮಾಡುವಂತೆ ರಿಜಿಸ್ಟ್ರಾರ್ ಜನರಲ್‍ಗೆ ಹೈಕೋರ್ಟ್ ನಿರ್ದೇಶಿಸಿದೆ. 

ಈ ಕುರಿತು ಲೈಸೋಸೋಮಲ್ ಸ್ಟೋರೇಜ್ ಡಿಸಾರ್ಡರ್ ಸೊಸೈಟಿ ಆಫ್ ಇಂಡಿಯಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಚಿಕಿತ್ಸೆಗೆ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‍ಆರ್) ನಿಧಿಯಡಿ ನೆರವು ನೀಡಲು ಇಚ್ಛಿಸಿರುವ ಕಂಪೆನಿಗಳು, ಸಂಘ-ಸಂಸ್ಥೆಗಳ ಪಟ್ಟಿಯನ್ನು ಸಲ್ಲಿಸುವಂತೆ ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ ಪರ ವಕೀಲರಿಗೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿತು. ಸದ್ಯ 45 ರೋಗಿಗಳು ಎಲ್‍ಎಸ್‍ಡಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News