ರಾಜ್ಯದಲ್ಲಿ ಬುಧವಾರ 181ಮಂದಿಗೆ ಕೋವಿಡ್ ದೃಢ, ಇಬ್ಬರು ಮೃತ್ಯು

Update: 2022-03-09 15:48 GMT

ಬೆಂಗಳೂರು, ಮಾ.9: ರಾಜ್ಯದಲ್ಲಿ ಬುಧವಾರ 181 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದು, 222 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 3943108ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,006ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 2,937ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಇಬ್ಬರ ಸಾವು: ಧಾರವಾಡ 1, ಮಂಡ್ಯ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 181 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ  ಬಳ್ಳಾರಿ 2, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 122, ಚಾಮರಾಜನಗರ 4, ಚಿಕ್ಕಮಗಳೂರು 5, ಚಿತ್ರದುರ್ಗ 5, ದಕ್ಷಿಣಕನ್ನಡ 3, ದಾವಣಗೆರೆ 1, ಧಾರವಾಡ 2, ಹಾಸನ 2, ಹಾವೇರಿ 1, ಕಲಬುರಗಿ 3, ಕೊಡಗು 2, ಕೋಲಾರ 1, ಮಂಡ್ಯ 1, ಮೈಸೂರು 6, ರಾಯಚೂರು 2, ರಾಮನಗರ 4, ಶಿವಮೊಗ್ಗ 1, ತುಮಕೂರು 4, ಉತ್ತರಕನ್ನಡ 1, ಯಾದಗಿರಿ  ಜಿಲ್ಲೆಯಲ್ಲಿ 3 ಪ್ರಕರಣ ಪತ್ತೆಯಾಗಿವೆ.  

ರಾಜಧಾನಿಯಲ್ಲಿ 122 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಬುಧವಾರದಂದು 122 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಒಟ್ಟು 17,60,489 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 17,79,857 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,937 ಜನರು ಸೋಂಕಿಗೆ ಬಲಿಯಾಗಿದ್ದಾರೆ. 
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News