ಮಾ.10: ಬೀದಿ ಬದಿ ವ್ಯಾಪಾರಿಗಳ ಸಂಘದ ಜಿಲ್ಲಾ ಸಮ್ಮೇಳನ
Update: 2022-03-09 21:47 IST
ಮಂಗಳೂರು, ಮಾ.9: ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ 5ನೇ ಜಿಲ್ಲಾ ಸಮ್ಮೇಳನವು ಮಾ.10ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ಬೆಳಗ್ಗೆ 10:30ಕ್ಕೆ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಸಂಘದ ಗೌರವಧ್ಯಕ್ಷ ಬಿ.ಕೆ. ಇಮ್ತಿಯಾಝ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್, ಚಿಂತಕಿ ರೀಟಾ ನೋರೋನ್ಹ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.