×
Ad

ಕಾರ್ಕಳ : ವಿಶೇಷ ಅಂಚೆ ಲಕೋಟೆ ಬಿಡುಗಡೆ

Update: 2022-03-09 23:09 IST

ಕಾರ್ಕಳ : ಕಾರ್ಕಳ ಉತ್ಸವದ ಪ್ರಯುಕ್ತ ವಿಶೇಷ ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮವು ಕಾರ್ಕಳದ ಗಾಂಧೀ ಮೈದಾನದಲ್ಲಿ ನಡೆಯಿತು.

ಲೋಕಸಭಾ ಮಾಜಿ ಸ್ಪೀಕರ್ ಜಸ್ಟಿನ್ ಕೆ ಎಸ್ ಹೆಗ್ಡೆ, ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ಶಿಲ್ಪಿ ರೆಂಜಾಳ ಗೋಪಾಲಕೃಷ್ಣ ಶೆಣೈ, ಕರ್ನಾಟಕ ಶಿಲ್ಪ ಕಲಾ ಅಕಾಡಮಿ ಪ್ರಥಮ ಅಧ್ಯಕ್ಷ ಶಿಲ್ಪಿ ಶ್ಯಾಮರಾಯ ಆಚಾರ್ಯ ರವರ ವಿಶೇಷ ಅಂಚೆ ಲಕೋಟೆ ಯನ್ನು ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತ ನ್ಯಾಯವಾದಿ ಎಂ ಕೆ ವಿಜಯಕುಮಾರ್, ಹೆಬ್ರಿ ತಹಶೀಲ್ದಾರ್ ಪುರಂದರ ಕೆ , ಕಾರ್ಕಳ ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಕಾರ್ಕಳ ಡಿವೈಎಸ್ಪಿ ವಿಜಯಪ್ರಸಾದ್, ಕಾರ್ಕಳ ಪುರಸಭಾ ಅಧ್ಯಕ್ಷೆ ಸುಮಾ ಕೇಶವ ‌, ಪುರಸಭೆ ಮುಖ್ಯಾಧಿಕಾರಿ ರೂಪ ಶೆಟ್ಟಿ,  ಅಂಚೆ ಇಲಾಖೆ ಅಧಿಕಾರಿ ವಿ ಎನ್ ಮಲ್ಲಿಕಾರ್ಜುನ,ಕನ್ನಡ ಸಂಸ್ಕೃತಿ ಇಲಾಖೆ ಅಧಿಕಾರಿ ಪೂರ್ಣಿಮಾ, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ ಕೆ ಎಸ್ ಗುರುಪ್ರಸಾದ್, ಕ್ಯಾಪ್ಟನ್ ಪ್ರಸನ್ನ ಹೆಗ್ಡೆ, ರಾಧಮಾಧವ ಶೆಣೈ, ಸತೀಶ್ ಆಚಾರ್ಯ ಉಪಸ್ಥಿತರಿದ್ದರು 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News