×
Ad

ಬೆಳ್ತಂಗಡಿ; ಮನೆಗೆ ನುಗ್ಗಿ ನಗ-ನಗದು ಕಳವು: ಬಿಜೆಪಿ ಮುಖಂಡ, ನೆರಿಯ ಗ್ರಾ.ಪಂ. ಸದಸ್ಯನ ವಿರುದ್ಧ ದೂರು ದಾಖಲು

Update: 2022-03-09 23:21 IST

ಬೆಳ್ತಂಗಡಿ: ನೆರಿಯ ಗ್ರಾಮದ ಕುಲೆನಾಡಿ ಎಂಬಲ್ಲಿ ಮನೆಯೊಂದರಿಂದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಿದ ಘಟನೆ ನಡೆದಿದ್ದು, ಈ ಬಗ್ಗೆ ಬಿಜೆಪಿ ಮುಖಂಡ, ಗ್ರಾಮ ಪಂಚಾಯತ್ ಸದಸ್ಯನೊಬ್ಬನ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇಲ್ಲಿನ ನಿವಾಸಿ ಚಂದ್ರಾವತಿ ಎಂಬವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದು ತನ್ನ ಮನೆಯಲ್ಲಿ ಇರಿಸಲಾಗಿದ್ದ 65 ಸಾವಿರ ರೂ. ನಗದು ಹಾಗೂ 44 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವುದಾಗಿ ದೂರು ನೀಡಿದ್ದಾರೆ.

ಈ ಬಗ್ಗೆ ಅವರು ನೀಡಿರುವ ದೂರಿನಲ್ಲಿ ತಮ್ಮ ಭಾವನ ಮಗ ಸಚಿನ್ ಮನೆಗೆ ಬಂದು ಹೋಗಿದ್ದು ಆತನೇ ಕಳ್ಳತನ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದಾರೆ. ಸಚಿನ್ ಬಿಜೆಪಿಯ ಸಕ್ರಿಯ ಕಾರ್ಯಕರ್ತ ನಾಗಿದ್ದು ನೆರಿಯ ಗ್ರಾಮ ಪಂಚಾಯತ್ ಸದಸ್ಯನಾಗಿದ್ದಾನೆ.  ಇದೀಗ ಧರ್ಮಸ್ಥಳ ಪೊಲೀಸರು ಚಂದ್ರಾವತಿ ಅವರು ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News