ಆಪ್ ಅಭ್ಯರ್ಥಿ ವಿರುದ್ಧ ಸೋತ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್

Update: 2022-03-10 07:03 GMT

ಹೊಸದಿಲ್ಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ತಮ್ಮ ಕ್ಷೇತ್ರವಾದ ಪಟಿಯಾಲಾ ಅರ್ಬನ್‌ನಲ್ಲಿ ಇಂದು ತಮ್ಮ ಆಮ್ ಆದ್ಮಿ ಪಕ್ಷದ (ಎಎಪಿ) ಪ್ರತಿಸ್ಪರ್ಧಿ ಅಜಿತ್ ಪಾಲ್ ಸಿಂಗ್ ಕೊಹ್ಲಿಯ ವಿರುದ್ಧ ಸೋಲುಂಡಿದ್ದಾರೆ.

ಅರವಿಂದ  ಕೇಜ್ರಿವಾಲ್ ಅವರ  ಎಎಪಿ ಪಂಜಾಬ್‌ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಅಂತರದಿಂದ ಗೆಲುವು ಸಾಧಿಸಲು  ಸಿದ್ಧವಾಗಿದ್ದು , ಆಡಳಿತಾರೂಢ ಕಾಂಗ್ರೆಸ್ ತೀವ್ರ ಹಿನ್ನಡೆಯಲ್ಲಿದೆ,

ಅಮರಿಂದರ್ ಸಿಂಗ್ ಅವರು ಸೆಪ್ಟೆಂಬರ್‌ನಲ್ಲಿ ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿದ ನಂತರ ಕಾಂಗ್ರೆಸ್‌ನಿಂದ ಬೇರ್ಪಟ್ಟು  ತಮ್ಮದೇ ಆದ ಪಂಜಾಬ್ ಲೋಕ ಕಾಂಗ್ರೆಸ್ ಅನ್ನು ಸ್ಥಾಪಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News