×
Ad

ಆಳಂದ ಪ್ರಕರಣ: ಕಲಬುರಗಿ ಎಸ್ಪಿಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

Update: 2022-03-10 12:42 IST

ಕಲುಬರಗಿ, ಮಾ.10: ಆಳಂದ ಪ್ರಕರಣದಲ್ಲಿ ಪೊಲೀಸರು ಅಮಾನವೀಯವಾಗಿ ನಡೆದುಕೊಂಡಿದ್ದರಿಂದ ಮಹಿಳೆಯೊಬ್ಬರು ಮೃತಪಟ್ಟಿರುವ ಕುರಿತ ದೂರಿನ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತಗೆ ನೋಟಿಸ್ ಜಾರಿಗೊಳಿಸಿದೆ.

ಮಾ.1ರಂದು ಆಳಂದ ಪಟ್ಟಣದ ಲಾಡ್ಲೇ ಮಶಾಕ್ ದರ್ಗಾದ ಬಳಿ ನಡೆದೆ ಕಲ್ಲು ತೂರಾಟ ಮತ್ತು ಸೆಕ್ಷನ್ 144 ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ಸಮುದಾಯದ ಜನರನ್ನು ಗುರಿಯಾಗಿಸಿ ಪೊಲೀಸರು ಮನೆಗಳ ಮೇಲೆ ದಾಳಿ ನಡೆಸಿ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ ಆರೋಪ ಕೇಳಿಬಂದಿತ್ತು. ಅಲ್ಲದೆ ಬೆಳಗ್ಗಿನ ಜಾವ ನಡೆಸಿದ ಈ ಕಾರ್ಯಾಚರಣೆ ವೇಳೆ ಪೊಲೀಸರು ಅಮಾಯಕ ಮಹಿಳೆಯರು ಮತ್ತು ಮಕ್ಕಳೊಂದಿಗೆ ಅನುಚಿತವಾಗಿ ವರ್ತಿಸಿದ ಪರಿಣಾಮ ಪಟ್ಟಣದ 41 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿರುವುದಾಗಿ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ.

ದೂರಿನ ಹಿನ್ನೆಲೆಯಲ್ಲಿ ಆಯೋಗವು ಈ ಪ್ರಕರಣದ ಕುರಿತು ನಾಲ್ಕು ವಾರದಲ್ಲಿ ವರದಿ ನೀಡುವಂತೆ ಎಸ್ಪಿಗೆ ನೋಟಿಸ್ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News