×
Ad

ಪಂಚರಾಜ್ಯ ಚುನಾವಣೆ: ಜನಾದೇಶದ ಕುರಿತು ಟ್ವೀಟ್‌ ಮಾಡಿದ ರಾಹುಲ್‌ ಗಾಂಧಿ

Update: 2022-03-10 15:55 IST

ಹೊಸದಿಲ್ಲಿ: ಪಂಚರಾಜ್ಯ ಚುನಾವಣೆಯ ಫಲಿತಾಂಶಗಳು ಈಗಾಗಲೇ ಬಹುತೇಷ ಸ್ಪಷ್ಟವಾಗಿದೆ. ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಪಕ್ಷವು ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ ಪಕ್ಷವು ನಿರೀಕ್ಷಿತ ಫಲಿತಾಂಶ ತೋರಿಸುವಲ್ಲಿ ವಿಫಲವಾಗಿದ್ದು, ಈ ಕುರಿತು ಇದೀಗ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಟ್ವಿಟರ್‌ ಮೂಲಕ ಹೇಳಿಕೆ ನೀಡಿದ್ದಾರೆ.

"ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಜನಾದೇಶವನ್ನು ಗೆದ್ದವರಿಗೆ ಶುಭಾಶಯಗಳು. ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ವಯಂಸೇವಕರಿಗೆ ಅವರ ಶ್ರಮ ಮತ್ತು ಸಮರ್ಪಣೆಗಾಗಿ ನನ್ನ ಕೃತಜ್ಞತೆಗಳು. ನಾವು ಇದರಿಂದ ಕಲಿಯುತ್ತೇವೆ ಮತ್ತು ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ." ಎಂದು ಅವರು ಟ್ವೀಟ್‌ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News