×
Ad

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ

Update: 2022-03-10 20:26 IST

ಉಡುಪಿ, ಮಾ.10: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನೋಂದಾ ಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಇಬ್ಬರು ಮಕ್ಕಳು ನರ್ಸರಿ, ಎಲ್‌ಕೆಜಿ ಮತ್ತು ಯುಕೆಜಿ ಓದುತ್ತಿದ್ದಲ್ಲಿ, ಶೈಕ್ಷಣಿಕ ಸಾಯಧನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಸೇವಾಸಿಂಧು ತಂತ್ರಾಂಶದಲ್ಲಿ ಮಾ.31ರವರೆಗೆ, ತಂದೆ ಮತ್ತು ತಾಯಿಯ ಆಧಾರ್ ಸಂಖ್ಯೆ, ಮಗುವಿನ ಆಧಾರ್ ಸಂಖ್ಯೆ ಹಾಗೂ ಮಗು ಶಾಲೆಗೆ ದಾಖಲಾಗಿರುವ ವಿವರ (ಶಾಲೆಗೆ ದಾಖಲಾದ ಪ್ರವೇಶ ಶುಲ್ಕ ರಶೀದಿ ಅಪ್ ಲೋಡ್ ಮಾಡಬೇಕು)ಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಮೇಲಿನ ಎಲ್ಲಾ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿದ್ದಲ್ಲಿ, ಸಹಾಯಧನ ಪಡೆಯಬಹುದಾಗಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಹಾಗೂ 1ನೇ ತರಗತಿಯಿಂದ ಉನ್ನತ ಶಿಕ್ಷಣದವರೆಗೆ ಶೈಕ್ಷಣಿಕ ಸಹಾಯಧನ ಪಡೆಯಲು ಎಸ್‌ಎಸ್‌ಪಿ ಪೋರ್ಟ್‌ಲ್‌ನಲ್ಲಿ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಕಾರ್ಮಿ ಅಧಿಕಾರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News