ಮೈಸೂರು:ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಕನ್ನಡ ಪುಸ್ತಕಗಳ ಮಾರಾಟ ಹಾಗೂ ಮೇಳೆ ಆಯೋಜನೆ
Update: 2022-03-10 22:05 IST
ಮೈಸೂರು,ಮಾ.10: ಕನ್ನಡ ಪುಸ್ತಕ ಪ್ರಾಧಿಕಾರ ಮೈಸೂರಿನ ಮಹಾರಾಜ ಕಾಲೇಜಿನ ಆವರಣದಲ್ಲಿ ಆಯೋಜಿಸಿರುವ ಕನ್ನಡ ಪುಸ್ತಕಗಳ ಮಾರಾಟ ಮೇಳವನ್ನು ಇಂದು ಹಿರಿಯ ವಿದ್ವಾಂಸ ಡಾ. ಟಿ. ವಿ ವೆಂಕಟಾಚಲ ಶಾಸ್ತ್ರಿ ಅವರು ಉದ್ಘಾಟಿಸಿದರು.
ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ , ಅಪರ ಪ್ರಾದೇಶಿಕ ಆಯುಕ್ತ ಶ್ರೀ ಶಿವರಾಜ್ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್, ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡಿeಕೆರೆ ಗೋಪಾಲ್ ಹಾಗೂ ನಿಕಟಪೂರ್ವ ಅಧ್ಯಕ್ಷ ಶ್ರೀ ಚಂದ್ರಶೇಖರ್, ಪ್ರಾಧಿಕಾರದ ಮಾಜಿ ಸದಸ್ಯ ಡಿ.ಎನ್.ಲೋಕಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು.