ಮಂಗಳೂರು: ಬಿಜೆಪಿ ಸಂಭ್ರಮಾಚರಣೆ

Update: 2022-03-10 17:31 GMT

ಮಂಗಳೂರು, ಮಾ.10: ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಗುರುವಾರ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮ ಆಚರಿಸಿದರು.

ನಗರದ ಕೊಡಿಯಾಲ್‌ ಬೈಲ್‌ನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯ ಮುಂದೆ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು. ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ., ಉತ್ತರ ಪ್ರದೇಶದಲ್ಲಿ ಬಿಜೆಪಿಯ ಗೆಲುವು ದೇಶದ ಭವಿಷ್ಯದ ಗೆಲುವಿನ ಮುನ್ಸೂಚನೆ ಎಂದರು.

ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆಯ ಮುಖ್ಯ ಸಚೇತಕ ಸುಧೀರ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಮುಡಾ ಅಧ್ಯಕ್ಷ ರವಿಶಂಕರ ಮಿಜಾರು, ಪಕ್ಷದ ಮುಖಂಡರಾದ ಶಕಿಲಾ ಕಾವಾ, ವಿಜಯ ಕುಮಾರ್ ಶೆಟ್ಟಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News