ಸ್ವಚ್ಛಗೊಳಿಸುವ ಸಂದರ್ಭ ಸೆಪ್ಟಿಕ್ ಟ್ಯಾಂಕ್‌ನೊಳಗೆ ಬಿದ್ದು ಮೂವರು ಕಾರ್ಮಿಕರು ಮೃತ್ಯು
Update: 2022-03-11 00:06 IST
ಮುಂಬೈ: ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ಸಂದರ್ಭ ಅದರೊಳಗೆ ಬಿದ್ದು ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಮುಂಬೈನ ಖಂಡಿವಲಿಯಲ್ಲಿ ನಡೆದಿದೆ.
ಸೆಪ್ಟಿಕ್ ಟ್ಯಾಂಕ್ ಗೆ ಬಿದ್ದ ಬಳಿಕ ಅವರನ್ನು ಅದರಿಂದ ಹೊರತೆಗೆದ ಸ್ಥಳೀಯರು ಮತ್ತು ಸಾರ್ವಜನಿಕರು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ಅವರು ಮೂವರೂ ಮೃತಪಟ್ಟಿದ್ದಾರೆ ಎಂದು ಶತಾಬ್ಧಿ ಆಸ್ಪತ್ರೆಯ ವೈದ್ಯರಾದ ಡಾ. ರಾಹುಲ್ ತಿಳಿಸಿರುವುದಾಗಿ ವರದಿಗಳು ಉಲ್ಲೇಖಿಸಿವೆ.