×
Ad

ಕರ್ನಾಟಕ ಹೈಕೋರ್ಟ್‍ನಲ್ಲಿ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Update: 2022-03-11 00:14 IST

ಬೆಂಗಳೂರು, ಮಾ.10: ರಾಜ್ಯ ಹೈಕೋರ್ಟ್‍ನಲ್ಲಿ ಖಾಲಿ ಇರುವ 54 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ(ಶೀಘ್ರ ಲಿಪಿಕಾರರು) ಹುದ್ದೆಗಳಿಗೆ ಹೈಕೋರ್ಟ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ.ಶಿವಶಂಕರೇಗೌಡ ಅವರು ಇದೇ ಮಾರ್ಚ್ 7ರಂದು ಅಧಿಸೂಚನೆ ಹೊರಡಿಸಿದ್ದಾರೆ. ಅಧಿಸೂಚನೆಯಲ್ಲಿ, ಅರ್ಹ ಅಭ್ಯರ್ಥಿಗಳು ಮುಂದಿನ ಎಪ್ರಿಲ್ 7ರ ಒಳಗೆ ಆನ್‍ಲೈನ್ ಮೂಲಕವೇ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ.

ಅಭ್ಯರ್ಥಿಗಳು ಎಸೆಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅಥವಾ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಆದರೆ, ಪದವಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 18 ರಿಂದ 35 ವರ್ಷದ ನಡುವೆ ಇರಬೇಕು. ಇತರೆ ಹಿಂದುಳಿದ ವರ್ಗಗಳಿಗೆ 3 ವರ್ಷ ಹಾಗೂ ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ. 

ಆಯ್ಕೆಯಾದ ಅಭ್ಯರ್ಥಿಗಳಿಗೆ 44,900 ರೂ. ಗಳಿಂದ 1,42,400 ರೂ. ವರೆಗೆ ವೇತನ ಇರಲಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗಕ್ಕೆ ಸೇರಿದ್ದರೆ 500 ರೂ. ಹಾಗೂ ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ 250 ರೂ. ಇದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ರಾಜ್ಯ ಹೈಕೋರ್ಟ್‍ನ ಅಧಿಕೃತ ವೆಬ್‍ಸೈಟ್‍ಗೆ ಭೇಟಿ ನೀಡಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News