ಯಶವಂತಪುರ: ರಸ್ತೆ ಅಪಘಾತಕ್ಕೆ ಡೆಂಟಲ್ ವಿದ್ಯಾರ್ಥಿ ಬಲಿ
Update: 2022-03-11 11:15 IST
ಯಶವಂತಪುರ: ರಸ್ತೆ ಅಪಘಾತದಲ್ಲಿ ಡೆಂಟಲ್ ವಿದ್ಯಾರ್ಥಿ ಮೃತಪಟ್ಟ ಘಟನೆ ಯಶವಂತಪುರದ ಬಿಎಚ್ಎಲ್ ಬಳಿ ನಡೆದಿದೆ.
ಮತ್ತೀನ್ (22) ಮೃತ ಡೆಂಟಲ್ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಬೈಕ್ ನಲ್ಲಿ ತೆರಳುತ್ತಿದ್ದಾಗ ಖಾಸಗಿ ಟೋಯಿಂಗ್ ವಾಹನ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೀನ್ ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಟೋಯಿಂಗ್ ಚಾಲಕನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಬಗ್ಗೆ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.