×
Ad

ದಿಲ್ಲಿ ನಗರ ಸಂಸ್ಥೆ ಚುನಾವಣೆ ಮುಂದೂಡದಂತೆ ಪ್ರಧಾನಿ ಮೋದಿಗೆ ಕೇಜ್ರಿವಾಲ್ ಒತ್ತಾಯ

Update: 2022-03-11 14:30 IST

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿನ ನಗರ ಸಂಸ್ಥೆಗಳ  ಚುನಾವಣೆಯನ್ನು ಮುಂದೂಡದಂತೆ ನೋಡಿಕೊಳ್ಳಬೇಕು ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ ಹಾಗೂ  ಚುನಾವಣೆಯನ್ನು ಮುಂದೂಡುವುದರಿಂದ ಪ್ರಜಾಪ್ರಭುತ್ವ ದುರ್ಬಲಗೊಳ್ಳುತ್ತದೆ ಎಂದು ಒತ್ತಿ ಹೇಳಿದರು.

ಮೂರು ನಗರ  ಸಂಸ್ಥೆಗಳನ್ನು ಒಗ್ಗೂಡಿಸಲು ಕೇಂದ್ರವು ಬಜೆಟ್ ಅಧಿವೇಶನದಲ್ಲಿ ಮಸೂದೆಯನ್ನು ತರಲು ಯೋಜಿಸಿದೆ ಹಾಗೂ  ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ಸಂವಹನವನ್ನು ಚುನಾವಣಾ ಸಮಿತಿ ಪರಿಶೀಲಿಸುತ್ತಿರುವುದರಿಂದ  ಚುನಾವಣಾ ವೇಳಾಪಟ್ಟಿಯ ಪ್ರಕಟಣೆಯನ್ನು ಮುಂದೂಡಲು ನಿರ್ಧರಿಸಿದೆ ಎಂದು ದಿಲ್ಲಿ ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ಮೂರು ಮುನ್ಸಿಪಲ್ ಕಾರ್ಪೊರೇಶನ್‌ಗಳಾದ ದಕ್ಷಿಣ ದಿಲ್ಲಿ ಮುನ್ಸಿಪಲ್ ಕಾರ್ಪೊರೇಶನ್, ಉತ್ತರ ದಿಲ್ಲಿ ಮುನ್ಸಿಪಲ್ ಕಾರ್ಪೊರೇಶನ್  ಹಾಗೂ  ಪೂರ್ವ ದಿಲ್ಲಿ ಮುನ್ಸಿಪಲ್ ಕಾರ್ಪೋರೇಶನ್  ಸದ್ಯ ಬಿಜೆಪಿಯ ಹಿಡಿತದಲ್ಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News