×
Ad

ಕಲಬುರಗಿ: ಮರಕ್ಕೆ ಕಾರು ಢಿಕ್ಕಿ; ಐವರು ಮೃತ್ಯು

Update: 2022-03-11 18:02 IST

ಕಲಬುರಗಿ: ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಮೃತಟ್ಟಿರುವ ಘಟನೆ ಅಫಜಲಪುರ ಹೊರವಲಯದಲ್ಲಿ ನಡೆದಿದೆ. 

ಶುಕ್ರವಾರ ಇಲ್ಲಿನ ದೇವಲಗಾಣಗಾಪುರಕ್ಕೆ ಬಂದಿದ್ದ ಇವರು ದತ್ತಾತ್ರೇಯರ ದರ್ಶನ ಪಡೆದು ಅಫಜಲಪುರ ಕಡೆಯಿಂದ ಮಹಾರಾಷ್ಟ್ರ ಕಡೆಗೆ ವಾಪಸ್ ಹೋಗುವಾಗ  ಅಫಜಲಪುರ- ಬಳೂರ್ಗಿ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮರಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. 

ಮೃತರನ್ನು ಮಹಾರಾಷ್ಟ್ರದ ಅಹ್ಮದ್ ನಗರದ ನಿವಾಸಿಗಳು ಎಂದು ಹೇಳಲಾಗುತ್ತಿದ್ದು, ಗುರುತು ಪತ್ತೆಗಾಗಿ ಪೊಲೀಸರು ಮಹಾರಾಷ್ಟ್ರ ಪೊಲೀಸರಿಗೆ ಸಂಪರ್ಕ ಸಾಧಿಸಿದ್ದಾರೆ.  

ಘಟನೆಯಲ್ಲಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.  

ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಅಫಜಲಪುರ ಸಿಪಿಐ ಜಗದೇವ ಪಾಳಾ, ಪಿಎಸ್ಐ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News