×
Ad

ಉಡುಪಿ: ಕೋಳ್ಯೂರು ರಾಮಚಂದ್ರ ರಾಯರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ

Update: 2022-03-11 20:00 IST

ಉಡುಪಿ, ಮಾ.11: ಇಲ್ಲಿನ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರವು, ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಹಾಗೂ ಇತರ ಸಂಸ್ಥೆಗಳ ಸಹಯೋಗದೊಂದಿಗೆ ನೀಡುವ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಾ.12ರ ಶನಿವಾರ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.

ಈ ವರ್ಷದ ಪ್ರಶಸ್ತಿಯನ್ನು ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಡಾ. ಕೋಳ್ಯೂರು ರಾಮಚಂದ್ರ ರಾವ್ ಅವರಿಗೆ ಪ್ರದಾನ ಮಾಡಲಾಗುವುದು. ಮಾಹೆ ಕುಲಸಚಿವ ಡಾ. ನಾರಾಯಣ ಸಭಾಹಿತ್ ಅವರು ಮುಖ್ಯ ಅತಿಥಿ ಗಳಾಗಿ ಭಾಗವಹಿಸುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ಎಸ್. ನಾಯ್ಕಾ ವಹಿಸಲಿದ್ದಾರೆ.

ಖ್ಯಾತ ಯಕ್ಷಗಾನ ಕಲಾವಿದರಾದ ಪ್ರೊ. ಎಂ.ಎಲ್. ಸಾಮಗ ಅಭಿನಂದನಾ ಭಾಷಣ ಮಾಡಲಿರುವರು. ಪ್ರಶಸ್ತಿ ಸಮಿತಿಯ ಕಾರ್ಯದರ್ಶಿಗಳಾದ ಮನೋರಮ ಎಂ. ಭಟ್ ಹಾಗೂ ಮಂಗಳೂರಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ.ಆರ್.ನರಸಿಂಹ ಮೂರ್ತಿ ಉಪಸ್ಥಿತರಿರುವರು ಎಂದು ಕೇಂದ್ರದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News