×
Ad

ಶಿಶು ಪಾಲನಾ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

Update: 2022-03-11 21:05 IST

ಉಡುಪಿ, ಮಾ.11: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸರಕಾರಿ ಕಚೇರಿ ಗಳಲ್ಲಿರುವ ಉದೋಗಸ್ಥ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲು ಜಿಲ್ಲೆಯ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳ ಮಾನಸಿಕ ಸಮಸ್ಯೆಗಳಿಗೆ ಸ್ಪಂಧಿಸಿ ಅವರ ಅಗತ್ಯಗಳಿಗೆ ಅನುಗುಣವಾಗಿ ಪರಿಹಾರ ಕೈಗೊಂಡು, ಅರ್ಪಣಾ ಮನೋಭಾವದಿಂದ ಕಾರ್ಯ ನಿರ್ವಹಿಸುವ ಸ್ವಯಂ ಸೇವಾ ಸಂಸ್ಥೆಗಳು ಮಾ.31ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ 0820-2574972ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News